SHIVAMOGGA LIVE NEWS | SHIMOGA | 29 ಜೂನ್ 2022
ಮದರಸಾಗಳಲ್ಲಿ ಶಸ್ತ್ರಾಸ್ತ್ರಗಳ ತರಬೇತಿ ನೀಡಲಾಗುತ್ತಿದೆ ಎಂಬ ಅನುಮಾನ ಮೂಡುತ್ತಿದೆ. ಮದರಸಾಗಳನ್ನು ಬ್ಯಾನ್ ಮಾಡಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ರಾಜಸ್ಥಾನದಲ್ಲಿ ಕನ್ನಯ್ಯ ಲಾಲ್ ಅವರ ಕಗ್ಗೊಲೆ (MURDER), ಕೇವಲ ಒಬ್ಬ ವ್ಯಕ್ತಿಯನ್ನು ಇಬ್ಬರು ಕೊಂದರು ಎಂಬುದಕ್ಕೆ ಸೀಮಿತವಾಗಲ್ಲ. ಇಡೀ ಹಿಂದು ಸಮಾಜಕ್ಕೆ ಇಡೀ ದೇಶದಲ್ಲೇ ಇದು ಸವಾಲಾಗಿದೆ ಎಂದು ಹೇಳಿದರು.
ನಮ್ಮ ಶ್ರದ್ಧಾಕೇಂದ್ರಗಳು ನೂರಾರು ವರ್ಷದಿಂದ ಅಪವಿತ್ರಗೊಂಡಿವೆ. ಅಯೋಧ್ಯೆಯಲ್ಲಿದ್ದ ರಾಮಮಂದಿರ ಧ್ವಂಸ ಮಾಡಿ ಬಾಬರಿ ಮಸೀದಿ ಕಟ್ಟಿದ್ದರು. ಇದು ಗೊತ್ತಿದ್ದರೂ ಕೂಡ ಅಪಮಾನವನ್ನು ನೂರಾರು ವರ್ಷ ಸಹಿಸಿಕೊಂಡು ಬಂದಿದ್ದೆವು.ಇಂದಿಗೂ ಕಾಶಿಯಲ್ಲಿ ವಿಶ್ವನಾಥನ ಲಿಂಗ ನೀರಿನಲ್ಲಿತ್ತು. ಆ ನೀರಿನಲ್ಲಿ ಮುಸಲ್ಮಾನರು ಕಾಲು ತೊಳೆದುಕೊಂಡು ಹೋಗಿ ನಮಾಜು ಮಾಡುತ್ತಿದ್ದರು. ಮಥುರಾದಲ್ಲಿ ಶ್ರೀಕೃಷ್ಣನ ಜನ್ಮ ಸ್ಥಳದ ದೇವಾಲಯ ಧ್ವಂಸ ಮಾಡಿ ಮಸೀದಿ ಕಟ್ಟಿದ್ದಾರೆ ಎಂದರು.
ಹಿಂದೂ ಸಮಾಜಕ್ಕೆ ಸವಾಲು
ಈ ಮೂರು ದೇವಸ್ಥಾನಗಳನ್ನು ನಾನು ಕಣ್ಣಾರೆ ಕಂಡಿದ್ದೇನೆ.ಹಿಂದು ಸಮಾಜ ಅಪಮಾನ ಸಹಿಸಿಕೊಂಡು ಶಾಂತಿಯಿಂದ ಇರುವಾಗ ನೂಪುರ್ ಶರ್ಮಾ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಮುಸ್ಲಿಂ ದೇಶಗಳಲ್ಲಿ ದೊಡ್ಡಮಟ್ಟದಲ್ಲಿ ಪ್ರತಿಭಟನೆ ನಡೆಯಿತು. ಆದರೆ ಇದೀಗ ರಾಜಸ್ಥಾನದಲ್ಲಿ ಬಡ ಟೈಲರ್ ಕೊಲೆ ಮಾಡಿದ್ದಾರೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿಯನ್ನು ಕೊಲೆ ಮಾಡುವುದಾಗಿ ಹೇಳಿದ್ದಾರೆ ಇದು ಹಿಂದು ಸಮುದಾಯಕ್ಕೆ ಆದ ಅಪಮಾನ ಹಾಗೂ ಸವಾಲು ಎಂದು ಹೇಳಿದರು.
ಇಷ್ಟೆಲ್ಲಾ ಅವಮಾನ, ಕೊಲೆಗಳು ನಡೆಯುತ್ತಿದ್ದರೂ ಕಾಂಗ್ರೆಸ್ ನಾಯಕರು ಆಗಿದ್ದು ಆಯಿತು ಎನ್ನುತ್ತಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಬಾಯಿ ಬಿಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಂತಕರನ್ನು ಗುಂಡಿಕ್ಕಿ ಕೊಲ್ಲಬೇಕು
ಸ್ವತಃ ರಾಷ್ಟ್ರದ್ರೋಹಿ ಕೊಲೆಗಡುಕರೇ ನಾವೇ ಕೊಂದಿದ್ದೇವೆ (MURDER) ಎಂದು ತಪ್ಪು ಒಪ್ಪಿಕೊಂಡಿದ್ದಾರೆ. ಆದರೆ ಈಗಿನ ಕಾನೂನಿನಲ್ಲಿ ಅವರ ಮೇಲೆ ಶೀಘ್ರವೇ ಕ್ರಮ ಕೈಗೊಳ್ಳಲು ಅವಕಾಶವಿಲ್ಲ. ಈಗಿನ ಕಾನೂನಿನಲ್ಲಿ ಅವರಿಗೆ ಜಾಮೀನು ಸಿಗುವ ಸಾಧ್ಯತೆಯಿದೆ. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರು ತುರ್ತು ಅಧಿವೇಶನ ಕರೆದು ಕಾನೂನು ಬದಲಾವಣೆ ಮಾಡಬೇಕು ಎಂದು ಮಾಜಿ ಸಚಿವ ಈಶ್ವರಪ್ಪ ಆಗ್ರಹಿಸಿದರು.
ಕೊಲೆಗಡುಕರು ಕೊಲೆ ಮಾಡಿದ್ದೇನೆ ಎಂದು ಹೇಳಿಕೊಂಡ ಮೇಲೆ ವಿಚಾರಣೆಯ ಅಗತ್ಯವಿಲ್ಲ. ಕೊಲೆಗಡುಕ ಎಂದು ತೀರ್ಮಾನವಾದ ಕೂಡಲೆ ಅವರನ್ನು ಗುಂಡಿಕ್ಕಿ ಕೊಲ್ಲಬೇಕು ಅಥವಾ ಗಲ್ಲಿಗೇರಿಸಬೇಕು ಎಂದು ಹೇಳಿದರು.
ವಿಶ್ವಸಂಸ್ಥೆಯಲ್ಲಿ ಚರ್ಚೆ ಆಗಬೇಕು
ಮದರಸಾಗಳಲ್ಲಿ ಶಸ್ತ್ರಾಸ್ತ್ರಗಳ ತರಬೇತಿ ನೀಡಲಾಗುತ್ತಿದೆ ಎಂಬ ಅನುಮಾನ ಮೂಡುತ್ತಿದೆ. ಮದರಸಾಗಳನ್ನು ಬ್ಯಾನ್ ಮಾಡಬೇಕು. ಇಲ್ಲವೇ ಅಲ್ಲಿ ದೇಶಭಕ್ತಿ ಮೂಡಿಸುವ ಶಿಕ್ಷಣ ಕೊಡಿಸುವ ಕೆಲಸ ಮಾಡಬೇಕು. ಪ್ರಧಾನಿಯನ್ನು ಕೊಲ್ಲುತ್ತೇವೆ ಎಂದು ಹೇಳಿರುವ ಹೇಳಿಕೆ ಬಗ್ಗೆ ವಿಶ್ವಸಂಸ್ಥೆಯಲ್ಲಿ ಚರ್ಚೆಯಾಗಬೇಕು. ಜೊತೆಗೆ ಉಗ್ರರ ಮೇಲೆ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಶೀಘ್ರವೇ ತೀರ್ಮಾನ ಕೈಗೊಳ್ಳಬೇಕು ಎಂದ ಅವರು, ಮುಂದಿನ ದಿನಗಳಲ್ಲಿ ಕಾಶಿಯೂ ಮುಕ್ತವಾಗಿ ಹಿಂದುಗಳ ಕೈಗೆ ಬರಲಿದೆ. ಮುಂದೆ ಹಿಂದುಗಳ ಆಕ್ರೋಶದಿಂದ ದೇಶದಲ್ಲಿ ಏನುಬೇಕಾದರೂ ಆಗಬಹುದು ಎಂದು ಎಚ್ಚರಿಕೆ ನೀಡಿದರು.
ಕನ್ನಯ್ಯ ಕೊಲೆ ಪ್ರಕರಣವನ್ನು ಎನ್ ಐಎಗೆ ವಹಿಸುವುದಾಗಿ ಕೇಂದ್ರ ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ಇದು ಸ್ವಾಗತಾರ್ಹ ಬೆಳವಣಿಗೆ ಎಂದರು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ರಾತ್ರೋರಾತ್ರಿ ಬೆಂಕಿ ಹಚ್ಚಿದ ಕಿಡಿಗೇಡಿ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.