ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 08 FEBRUARY 2021
ಕುರುಬರ ಎಸ್.ಟಿ. ಮೀಸಲಾತಿ ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಂದರೆ ಸಂತೋಷ. ಬರದಿದ್ದರೆ ಬೇಡ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರಪ್ಪ, ಸಿದ್ದರಾಮಯ್ಯ ಅವರು ಮೊದಲಿಗೆ ನನ್ನನ್ನು ಸಮಾವೇಶಕ್ಕೆ ಕರೆದಿಲ್ಲ ಎಂದು ಆರೋಪಿಸಿದ್ದರು. ಶ್ರೀ ನಿರಂಜನಾನಂದಪುರ ಸ್ವಾಮೀಜಿ, ಶ್ರೀ ಈಶ್ವರಾನಂದ ಪುರಿ ಸ್ವಾಮೀಜಿ ಅವರು ಕರೆ ಮಾಡಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ್ದರು. ನಾನು ಕೂಡ ಕರೆ ಮಾಡಿ ಅವರನ್ನು ಆಹ್ವಾನಿಸಿದ್ದೆ. ಈಗ ಹೇಳಿಕೆ ಬದಲಿಸಿದ್ದಾರೆ. ಹೋರಾಟದ ಹಿಂದೆ ಆರ್ಎಸ್ಎಸ್ ಇದೆ ಎಂದು ಆಪಾದಿಸುತ್ತಿದ್ದಾರೆ. ಅವರು ಹೋರಾಟಕ್ಕೆ ಬಂದರೆ ಸಂತೋಷ. ಬರದೆ ಇದ್ದರೆ ಬೇಡ ಎಂದರು.
ಕುರಬರ ಪಾಲಿಗೆ ಐತಿಹಾಸಿಕ ದಿನ
ಎಸ್.ಟಿ. ಮೀಸಲಾತಿಗಾಗಿ ಬೆಂಗಳೂರಿನಲ್ಲಿ ನಡೆದ ಸಮಾವೇಶದಲ್ಲಿ ಕುರುಬರು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. ಇಷ್ಟೊಂದು ಪ್ರಮಾಣದಲ್ಲಿ ಕುರುಬರು ಒಟ್ಟಿಗೆ ಸೇರಿದ್ದು ಇದೆ ಮೊದಲು. ಹಾಗಾಗಿ ಫೆಬ್ರವರಿ 7 ಕುರುಬರ ಪಾಲಿಗೆ ಐತಿಹಾಸಿಕ ದಿನವಾಗಿದೆ ಎಂದು ಈಶ್ವರಪ್ಪ ತಿಳಿಸಿದರು.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕುರುಬರಿಗೆ ಎಸ್.ಟಿ.ಮೀಸಲಾತಿ ಇದೆ. ಇದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಿಗಬೇಕು. ಈ ಸಂಬಂಧ ಸಂಪುಟದಲ್ಲಿ ತೀರ್ಮಾನಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದರು.
ರಾಜ್ಯ ಬಿಜೆಪಿಗಿಲ್ಲ ಕ್ರಮದ ಅಧಿಕಾರ
ಇನ್ನು, ಮುಖ್ಯಮಂತ್ರಿ ವಿರುದ್ಧ ಪದೇ ಪದೇ ಹೇಳಿಕೆ ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರ ರಾಜ್ಯ ಬಿಜೆಪಿಗೆ ಇಲ್ಲ. ಎಂಎಲ್ಎಲ್, ಎಂಎಲ್ಸಿಗಳ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರ ಕೇಂದ್ರ ಬಿಜೆಪಿಗೆ ಮಾತ್ರ ಇದೆ. ಈಗಾಗಲೇ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಯತ್ನಾಳ್ ವಿರುದ್ಧ ಕೇಂದ್ರ ಬಿಜೆಪಿಗೆ ದೂರು ಸಲ್ಲಿಸಿದ್ದಾರೆ ಎಂದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






