ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಜುಲೈ 2021
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಆಡಿಯೋ ಲೀಕ್ ಆದ ಬೆನ್ನಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ ನಡೆಸಿದರು.
ಸುದ್ದಿಗೋಷ್ಠಿಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದೇನು? ಇಲ್ಲಿದೆ ಟಾಪ್ 5 ಪಾಯಿಂಟ್
ರಾಜಕಾರಣದಲ್ಲಿ ಅಧಿಕಾರ ಶಾಶ್ವತ ಅಲ್ಲ. ನಾನು ಮಂತ್ರಿ ಸ್ಥಾನಕ್ಕಾಗಿ ಗೂಟ ಹೊಡೆದುಕೊಂಡು ಕುಳಿತಿಲ್ಲ. ಹೋದರೆ ಒಂದು ಗೂಟ ಹೋಯ್ತು ಎಂದುಕೊಳ್ಳುತ್ತೇನೆ.
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಆಡಿಯೋ ವಿಚಾರ ಸುಳ್ಳು. ಇದನ್ನು ಅವರು ಒಪ್ಪಿಕೊಂಡಿದ್ದಾರೆ. ಅದನ್ನು ಯಾರೋ ಹುಚ್ಚನೊಬ್ಬ ವೈರಲ್ ಮಾಡಿದ್ದಾನೆ. ಈ ಈ ಬಗ್ಗೆ ತನಿಖೆಯಾಗಲಿ.
ದೇಶದ ಅಭಿವೃದ್ಧಿ, ಹಿಂದೂ ಸಮಾಜದ ಏಳಿಗೆಗಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಮುಂದೆಯು ನನ್ನ ಗಮನ ಅದರ ಕಡೆಗೆ ಇರಲಿದೆ.
ಸಂಘಟನೆ ಮತ್ತು ಹಿರಿಯರು ಯಾವ ಜವಾಬ್ದಾರಿ ನೀಡುತ್ತಾರೋ ಅದನ್ನು ನಿರ್ವಹಿಸಿಕೊಂಡು ಬಂದಿದ್ದೇನೆ. ಮುಂದೆಯು ಅದನ್ನೆ ನಿರ್ವಹಿಸುತ್ತೇನೆ. ಸಚಿವ ಸ್ಥಾನ ತೊರೆಯಿರಿ ಎಂದು ಸಂಘಟನೆ ಸೂಚಿಸಿದರೆ ನಾನು ಆ ಕೆಲಸ ಮಾಡುತ್ತೇನೆ. ಆದರೆ ನಾನಾಗಿ ರಾಜೀನಾಮೆ ನೀಡುವುದಿಲ್ಲ.
ಯುವಕರಿಗೆ ಆದ್ಯತೆ ನೀಡಬೇಕು ಎಂದು ಪಕ್ಷ ಯೋಚಿಸಿದೆ. ನನಗೆ 72 ವರ್ಷ ವಯಸಾಗಿದೆ. ಯುವಕರಿಗೆ ಅವಕಾಶ ಸಿಗಲಿದೆ. ದೇಶ ಮತ್ತು ರಾಜ್ಯದಲ್ಲಿ ಬಿಜೆಪಿಯೆ ಅಧಿಕಾರಕ್ಕೆ ಬರಲಿದೆ. ದೇಶದ ಆಡಳಿತ ನಡೆಸಲಿದೆ.
ಸಚಿವ ಈಶ್ವರಪ್ಪ ಅವರ ಸುದ್ದಿಗೋಷ್ಠಿಯ ವಿಡಿಯೋ ರಿಪೋರ್ಟ್
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200