ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 27 MARCH 2024
ELECTION NEWS : ಲೋಕಸಭೆ ಚುನಾವಣೆಗೆ ಸ್ವತಂತ್ರವಾಗಿ ಕಣಕ್ಕಿಳಿಯುವುದಾಗಿ ಘೋಷಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಪ್ರಚಾರ ಕಾರ್ಯವನ್ನು ಮತ್ತಷ್ಟು ಬಿರುಸುಗೊಳಿಸಿದ್ದಾರೆ. ಈ ಮಧ್ಯೆ ತಾವು ನಾಮಪತ್ರ ಸಲ್ಲಿಸುವ ದಿನಾಂಕವನ್ನು ಘೋಷಿಸಿದ್ದಾರೆ.
ಮಾ.26ರಂದು ಈಶ್ವರಪ್ಪ ಎಲ್ಲೆಲ್ಲಿ ಪ್ರಚಾರ ನಡೆಸಿದರು?
ಬೂತ್ ಮಟ್ಟದ ಕಾರ್ಯಕರ್ತರ ಸಭೆ
ಶಿವಮೊಗ್ಗದ ಶುಭ ಮಂಗಳ ಕಲ್ಯಾಣ ಮಂಟಪದಲ್ಲಿ ರಾಷ್ಟ್ರ ಭಕ್ತರ ಬಳಗದಿಂದ ನಗರ ಮತ್ತು ಗ್ರಾಮಾಂತರ ಮಟ್ಟದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿತ್ತು. ಸ್ವತಂತ್ರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಸಮಾವೇಶ ಉದ್ಘಾಟಿಸಿದರು.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 108 ರಿಂದ 66 ಸ್ಥಾನಕ್ಕೆ ಕುಸಿಯಿತು. ಇದು ಕಾರ್ಯಕರ್ತರಿಂದ ಆದ ಸೋಲಲ್ಲ. ಬದಲಿಗೆ ನಮ್ಮದೇ ಪಕ್ಷದ ಕೆಲವು ನಾಯಕರಿಂದ ಆದ ಸೋಲು. ಪಕ್ಷವನ್ನು ಶುಚಿಗೊಳಿಸುವ ಉದ್ದೇಶದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ನನ್ನ ಜೊತೆ ಬರುವವರು ಸ್ವಾಭಿಮಾನಿಗಳು.ಕೆ.ಎಸ್.ಈಶ್ವರಪ್ಪ, ಸ್ವತಂತ್ರ ಅಭ್ಯರ್ಥಿ
ನಾಮಪತ್ರ ಸಲ್ಲಿಕೆ ದಿನಾಂಕ ಪ್ರಕಟ
ಇದೇ ವೇಳೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ದಿನಾಂಕವನ್ನು ಕೆ.ಎಸ್.ಈಶ್ವರಪ್ಪ ಘೋಷಿಸಿದರು. ‘ಚುನಾವಣೆ ದಿನಾಂಕ ಘೋಷಣೆಯಾಗಿದೆ. ಆದರೆ ತಮ್ಮ ಚಿಹ್ನೆ ಇನ್ನೂ ಅಂತಿಮವಾಗಿಲ್ಲ. 25 ಸಾವಿರ ಕಾರ್ಯಕರ್ತರ ಜೊತೆಗೆ ಏಪ್ರಿಲ್ 12ರಂದು ನಾಮಪತ್ರ ಸಲ್ಲಿಸುತ್ತೇನೆʼ ಎಂದು ತಿಳಿಸಿದ್ದಾರೆ.
ಭದ್ರಾವತಿಯಲ್ಲಿ ಬೈಕ್ ರ‍್ಯಾಲಿ
ಭದ್ರಾವತಿಯಲ್ಲಿ ಈಶ್ವರಪ್ಪ ಅವರ ಅಭಿಮಾನಿಗಳು ಬೈಕ್ ರ‍್ಯಾಲಿ ನಡೆಸಿದರು. ಹುತ್ತ ಬಸ್ ನಿಲ್ದಾಣದಿಂದ ಸಿದ್ಧಾರೂಢನಗರದ ಧರ್ಮಶ್ರೀ ಸಭಾ ಭವನದವರೆಗೆ ಜಾಥಾ ನಡೆಸಲಾಯಿತು. ಈ ಸಂದರ್ಭ ಬೆಂಬಲಿಗರು ಈಶ್ವರಪ್ಪ ಅವರಿಗೆ ಬೃಹತ್ ಹಾರ ಹಾಕಿದರು.
ಬೆಂಬಲಿಗರ ಸಭೆ ನಡೆಸಿದ ಈಶ್ವರಪ್ಪ
ಧರ್ಮಶ್ರೀ ಸಭಾ ಭವನದಲ್ಲಿ ಬೆಂಬಲಿಗರ ಸಭೆ ನಡೆಸಿದ ಈಶ್ವರಪ್ಪ, ‘ಪಕ್ಷವನ್ನು ಶುಚಿಗೊಳಿಸುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ವರಿಷ್ಠರು ಕರೆದು ಚರ್ಚಿಸಿದರೆ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡುತ್ತೇನೆ. ಆದರೆ ಬ್ರಹ್ಮ ಬಂದು ಹೇಳಿದರು ಚುನಾವಣೆಯಿಂದ ಹಿಂದೆ ಸರಿಯುವುದಿಲ್ಲʼ ಎಂದರು.
ಇದನ್ನೂ ಓದಿ – ಗೀತಾ ಶಿವರಾಜ್ ಕುಮಾರ್ ಪ್ರಚಾರ ಬಿರುಸು, ಎಲ್ಲೆಲ್ಲಿ ಹೇಗಿದೆ ಜನರ ರೆಸ್ಪಾನ್ಸ್?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422