‘ದಿಕ್ಕು ತಪ್ಪಿಸುತ್ತಿದೆ ಕಾಂಗ್ರೆಸ್, ಮಂಗಳೂರು ಗಲಭೆಯಲ್ಲಿ ಕೇರಳದವರ ಕೈವಾಡ, ಗೂಂಡಾಗಿರಿ ವಿರುದ್ಧ ಕ್ರಮ ನಿಶ್ಚಿತ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 21 ಡಿಸೆಂಬರ್ 2019

ಮಂಗಳೂರು ಗೋಲಿಬಾರ್‌ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವುದಿಲ್ಲ. ಗೂಂಡಾಗಿರಿ ಪ್ರದರ್ಶಿಸುವವರ ವಿರುದ್ಧ ಕ್ರಮ ನಿಶ್ಚಿತ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳ ಅಂಕಿತ ಬಿದ್ದು ಅದು ಕಾಯ್ದೆಯಾಗಿ ಪರಿವರ್ತನೆಯಾಗಿದೆ. ಕಾಯ್ದೆ ಬಗ್ಗೆ ಕಾಂಗ್ರೆಸ್ ದೇಶದ ಮತ್ತು ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದೆ ಎಂದು ಈಶ್ವರಪ್ಪ ದೂರಿದರು.

ಈ ಕಾಯ್ದೆಯಿಂದ ದೇಶದ ಮುಸ್ಲಿಮರಿಗೆ ಯಾವುದೇ ತೊಂದರೆಯಿಲ್ಲ. ಬಿಜೆಪಿ ಉಪ ಚುನಾವಣೆ ಹಾಗೂ ಸಂಸತ್ ಚುನಾವಣೆಯಲ್ಲಿ ಗಣನೀಯ ಸಾಧನೆ ತೋರಿದ್ದರಿಂದ ಕಾಂಗ್ರೆಸ್ ಮೂಲೆಗುಂಪಾಗಿದೆ. ಹೀಗಾಗಿ ಕಾಂಗ್ರೆಸ್‌ಗೆ ಜನರನ್ನು ಕೆಣಕಲು ವಿಷಯ ಬೇಕಿತ್ತು. ಹೀಗಾಗಿ ಗಲಭೆ ಸೃಷ್ಟಿ ಮಾಡುತ್ತಿದೆ. ಮಂಗಳೂರು ಗಲಭೆಯಲ್ಲಿ ಕೇರಳದ ಕಿಡಿಗೇಡಿಗಳ ಕೈವಾಡವಿದೆ ಎಂದು ಹೇಳಲಾಗುತ್ತಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಬಳಿ ಈ ಬಗ್ಗೆ ಮಾಹಿತಿ ಇದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

Minister KS Eshwarappa says a strict action will be taken against those who broke clash in Mangalore.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment