ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 21 ಡಿಸೆಂಬರ್ 2019
ಮಂಗಳೂರು ಗೋಲಿಬಾರ್ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವುದಿಲ್ಲ. ಗೂಂಡಾಗಿರಿ ಪ್ರದರ್ಶಿಸುವವರ ವಿರುದ್ಧ ಕ್ರಮ ನಿಶ್ಚಿತ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳ ಅಂಕಿತ ಬಿದ್ದು ಅದು ಕಾಯ್ದೆಯಾಗಿ ಪರಿವರ್ತನೆಯಾಗಿದೆ. ಕಾಯ್ದೆ ಬಗ್ಗೆ ಕಾಂಗ್ರೆಸ್ ದೇಶದ ಮತ್ತು ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದೆ ಎಂದು ಈಶ್ವರಪ್ಪ ದೂರಿದರು.
ಈ ಕಾಯ್ದೆಯಿಂದ ದೇಶದ ಮುಸ್ಲಿಮರಿಗೆ ಯಾವುದೇ ತೊಂದರೆಯಿಲ್ಲ. ಬಿಜೆಪಿ ಉಪ ಚುನಾವಣೆ ಹಾಗೂ ಸಂಸತ್ ಚುನಾವಣೆಯಲ್ಲಿ ಗಣನೀಯ ಸಾಧನೆ ತೋರಿದ್ದರಿಂದ ಕಾಂಗ್ರೆಸ್ ಮೂಲೆಗುಂಪಾಗಿದೆ. ಹೀಗಾಗಿ ಕಾಂಗ್ರೆಸ್‌ಗೆ ಜನರನ್ನು ಕೆಣಕಲು ವಿಷಯ ಬೇಕಿತ್ತು. ಹೀಗಾಗಿ ಗಲಭೆ ಸೃಷ್ಟಿ ಮಾಡುತ್ತಿದೆ. ಮಂಗಳೂರು ಗಲಭೆಯಲ್ಲಿ ಕೇರಳದ ಕಿಡಿಗೇಡಿಗಳ ಕೈವಾಡವಿದೆ ಎಂದು ಹೇಳಲಾಗುತ್ತಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಬಳಿ ಈ ಬಗ್ಗೆ ಮಾಹಿತಿ ಇದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
Minister KS Eshwarappa says a strict action will be taken against those who broke clash in Mangalore.
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





