BREAKING NEWS – ಬಿಜೆಪಿಯಿಂದ ಈಶ್ವರಪ್ಪ ಉಚ್ಛಾಟನೆ, ಆದೇಶ ಪ್ರಕಟ, ಎಷ್ಟು ವರ್ಷ ಉಚ್ಛಾಟಿಸಲಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 APRIL 2024

ELECTION NEWS : ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ. ಈ ಸಂಬಂಧ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್‌ ಪಾಟೀಲ್‌ ಆದೇಶ ಹೊರಡಿಸಿದ್ದಾರೆ.

ಆದೇಶದಲ್ಲಿ ಏನಿದೆ?

ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದಾರೆ. ಇದರಿಂದ ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಿಗೊಳಿಸಲಾಗಿದೆ. ಅಲ್ಲದೆ ಆರು ವರ್ಷ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಖಾಲಿ ಚೊಂಬು ಜಾಹೀರಾತು ಕೊಡಲು ಕಾರಣ ಬಯಲು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 22, 2024

Leave a Comment