ಶಿವಮೊಗ್ಗದಲ್ಲಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ ಈಶ್ವರಪ್ಪ, ಇದು ಮೂರನೇ ನಾಮಪತ್ರ

SHIVAMOGGA LIVE NEWS | 15 APRIL 2024

ಸುದ್ದಿಯ ಮುಂದಿನ ಭಾಗ ಕೆಳಗಿದೆ

LOKSABHA NEWS : ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಇಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರನ್ನು ಭೇಟಿಯಾಗಿ ಪುನಃ ನಾಮಪತ್ರ ಸಲ್ಲಿಸಿದರು. ಇದು ಈಶ್ವರಪ್ಪ ಅವರ ಹೆಸರಿನಲ್ಲಿ ಸಲ್ಲಿಕೆಯಾಗುತ್ತಿರುವ ಮೂರನೇ ನಾಮಪತ್ರ. ಏ.12ರಂದು ಈಶ್ವರಪ್ಪ ಅವರು ಒಂದು ನಾಮಪತ್ರ ಸಲ್ಲಿಸಿದ್ದರು. ಇದಕ್ಕೂ ಮೊದಲು ಅವರ ಬೆಂಬಲಿಗರಾದ ಈ.ವಿಶ್ವಾಸ್‌ ಮತ್ತಿತರರು ಒಂದು ನಾಮಪತ್ರ ಸಲ್ಲಿಕೆ ಮಾಡಿದ್ದರು. ಈಗ ಮೂರನೇ ನಾಮಪತ್ರ ಸಲ್ಲಿಸಿರುವುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ – ‘ಎರಡೇ ವಾರದಲ್ಲಿ ಈಶ್ವರಪ್ಪ ಮಾತು ಬದಲಿಸಿದ್ದೇಕೆ, ನಮ್ಮ ಕುಟುಂಬವನ್ನು ಪ್ರಶ್ನಿಸುತ್ತಿರುವುದೇಕೆ?ʼ

Nanjappa Hospital Advertisement

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment