ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 11 APRIL 2023
SHIMOGA : ಚುನಾವಣಾ ರಾಜಕೀಯ ನಿವೃತ್ತಿ (Retirement) ಘೋಷಣೆ ಬಳಿಕ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶಿವಮೊಗ್ಗದ ಮಲ್ಲೇಶ್ವರ ನಗರದ ಮನೆಯಲ್ಲಿ ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದರು. ಈ ವೇಳೆ ಈಶ್ವರಪ್ಪ ಅವರು ಏನೇನು ಹೇಳಿದರು. ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.
“ಬೆಂಗಳೂರಿನಲ್ಲಿ ನಡೆದ ರಾಜ್ಯ ಚುನಾವಣಾ ಸಮಿತಿ ಸಭೆಯಲ್ಲಿ ಚುನಾವಣಾ ರಾಜಕೀಯ ನಿವೃತ್ತಿ (Retirement) ಕುರಿತು ಹಿರಿಯರ ಗಮನಕ್ಕೆ ತಂದಿದ್ದೆ. ತಮ್ಮ ಮಾತಿಗೆ ಅವರು ಒಪ್ಪಲಿಲ್ಲ. ಇದರಿಂದ ನನಗೆ ಸಮಾಧಾನವಾಗಲಿಲ್ಲ. ಆದ್ದರಿಂದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಇವತ್ತು ಪತ್ರ ಬರೆದಿದ್ದೇನೆ.”
ಈಶ್ವರಪ್ಪ ಅವರು ಬರೆದ ಪತ್ರ ಇಲ್ಲಿದೆ.
“ಚುನಾವಣೆ ಸಂದರ್ಭ ಪಕ್ಷ ಯಾವುದೆ ಜಾವಾಬ್ದಾರಿ ನೀಡಿದರು ಅದನ್ನು ನಿಭಾಯಿಸಲು ಸಿದ್ಧನಿದ್ದೇನೆ. ರಾಜ್ಯದಲ್ಲಿ ಈತನಕ ಬಿಜೆಪಿಗೆ ಪೂರ್ಣ ಬಹುಮತ ಸಿಕ್ಕಿಲ್ಲ. ಈ ಬಾರಿ ಪೂರ್ಣ ಬಹುಮತದೊಂದಿಗೆ ಪಕ್ಷ ಅಧಿಕಾರಕ್ಕೆ ಬರಬೇಕಿದೆ. ಬಿಜೆಪಿಯನ್ನು ಅಧಿಕಾರಕ್ಕೆ ತಂದೆ ತರುತ್ತೇವೆ.”
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಾಜಿ ಸಚಿವ ಈಶ್ವರಪ್ಪ ಮನೆ ಮುಂದೆ ಜಮಾಯಿಸಿದ ಅಭಿಮಾನಿಗಳು
“ತಾವು ಶಾಸಕರಾಗಬೇಕು ಎಂದು ಅಪೇಕ್ಷೆ ಪಡುವವರು ಹಲವರಿದ್ದಾರೆ. ಆದರೆ ಇವತ್ತು ನಾನು ಮಾಡಿರುವ ಕೆಲಸಕ್ಕೆ ಕಾರ್ಯಕರ್ತರು, ಹಿರಿಯರು ಮೆಚ್ಚುತ್ತಾರೆ ಎಂದು ಭಾವಿಸಿದ್ದೇನೆ. ಪ್ರತಿ ಕ್ಷೇತ್ರದಿಂದ ಮೂರು ಹೆಸರುಗಳು ಕೇಂದ್ರ ಚುನಾವಣಾ ಸಮಿತಿಗೆ ರವಾನಿಸಲಾಗಿದೆ. ಕೇಂದ್ರ ಚುನಾವಣೆ ಸಮಿತಿ ನಿರ್ಧಾರ ಮಾಡಿದವರು ಶಿವಮೊಗ್ಗ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.”
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422