ಶಿವಮೊಗ್ಗ ಲೈವ್.ಕಾಂ |SHIMOGA NEWS | 17 NOVEMBER 2020
ಶಿರಾ ಉಪ ಚುನಾವಣೆ ಗೆಲುವಿನ ಸಂಬಂಧ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಮಾಧ್ಯಮಗಳಲ್ಲಿ ವೈಭವೀಕರಿಸಲಾಗುತ್ತಿದೆ. ಇದಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ‍್ವರಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಉಪ ಚುನಾವಣೆಯಲ್ಲಿ ವಿಜಯೇಂದ್ರ ಅವರೊಬ್ಬರೆ ಕೆಲಸ ಮಾಡಿದ್ದಾ. ಮಾಧ್ಯಮಗಳಲ್ಲಿ ವಿಜಯೇಂದ್ರ ಅವರನ್ನು ವೈಭವೀಕರಿಸಲಾಗುತ್ತಿದೆ. ಇದು ಸರಿಯಲ್ಲ ಎಂದರು.
ಅವರೊಬ್ಬರಿಗೆ ಜವಾಬ್ದಾರಿ ಕೊಟ್ಟಿರಲಿಲ್ಲ
ಉಪ ಚುನಾವಣೆಯಲ್ಲಿ ವಿಜಯೇಂದ್ರ ಅವರಿಗೂ ಜವಾಬ್ದಾರಿ ನೀಡಲಾಗಿತ್ತು. ಹಾಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸುರೇಶ್ ಗೌಡ ಅವರಿಗೂ ಶಿರಾ ಜವಾಬ್ದಾರಿ ನೀಡಲಾಗಿತ್ತು. ಆರ್.ಆರ್.ನಗರದಲ್ಲಿ ಕಂದಾಯ ಸಚಿವ ಆರ್.ಅಶೋಕ್, ಉಪ ಮುಖ್ಯಮಂತ್ರಿ ಅಶ್ವಥ ನಾರಾಯಣ ಅವರಿಗೆ ಜವಾಬ್ದಾರಿ ನೀಡಲಾಗಿತ್ತು. ಎಲ್ಲರು ಸಮರ್ಥವಾಗಿ ಕೆಲಸ ಮಾಡಿದ್ದರಿಂದ ಎರಡು ಕ್ಷೇತ್ರದಲ್ಲಿ ಗೆಲುವು ಸಾಧಿಸಲಾಗಿದೆ. ವಿಜಯೇಂದ್ರ ಒಬ್ಬರನ್ನೆ ವೈಭವೀಕರಿಸುವುದು ಸರಿಯಲ್ಲ ಎಂದು ಈಶ್ವರಪ್ಪ ತಿಳಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]