ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 2 ಜನವರಿ 2020
ಇದು ಬೀದಿಯಲ್ಲಿ ನಿಂತು ಚರ್ಚೆ ಮಾಡುವ ವಿಚಾರವಲ್ಲ. ಪಕ್ಷದ ಒಳಗೆ, ಶಾಸಕಾಂಗ ಸಭೆಯಲ್ಲಿ, ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ಮಾಡಬೇಕಾದ ವಿಚಾರ. ಉಪಮುಖ್ಯಮಂತ್ರಿ ಹುದ್ದೆ ಬೇಕೋ ಬೇಡವೋ ಎಂಬ ಚರ್ಚೆಗೆ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ಇದೆ.
ಡಿಸಿಎಂ ಹುದ್ದೆ ಬೇಡ ಅಂತಾ ಶಾಸಕ ರೇಣುಕಾಚಾರ್ಯ ಅವರು ಸಹಿ ಸಂಗ್ರಹಿಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ, ಶಾಸಕ ರೇಣುಕಾಚಾರ್ಯ ಅವರು ಸಹಿ ಸಂಗ್ರಹಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಡಿಸಿಎಂ ಹುದ್ದೆ ಬೇಕೋ ಬೇಡವೋ ಎಂಬ ಕುರಿತು ಪಕ್ಷದ ತೀರ್ಮಾನವೇ ಅಂತಿಮ ಎಂದರು.
ಇನ್ನು ಸಂಪುಟ ವಿಸ್ತರಣೆ ಕುರಿತು ಕೇಳಿದ ಪ್ರಶ್ನೆಗೆ, ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂಬುದನ್ನು ಮುಖ್ಯಮಂತ್ರಿಗಳು ನಿರ್ಧರಿಸಲಿದ್ದಾರೆ. ಸಂಕ್ರಾಂತಿ ಹಬ್ಬದ ಬಳಿಕ ಸಂಪುಟ ವಿಸ್ತರಣೆ ಆಗಲಿದೆ ಅಂತಲೂ ಮುಖ್ಯಮಂತ್ರಿ ಹೇಳಿದ್ದಾರೆ ಎಂದರು.
ನಾವಾಗಿಯೇ ಎಂದೂ ಜಗಳಕ್ಕೆ ಹೋಗಲ್ಲ
ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಕುರಿತು ಕೇಳಿದ ಪ್ರಶ್ನೆಗೆ, ನದಿ, ಗಡಿ, ಭಾಷೆಯ ವಿಚಾರದಲ್ಲಿ ನಾವಾಗಿಯೇ ಎಂದು ಜಗಳಕ್ಕೆ ಹೋಗುವುದಿಲ್ಲ. ಒಂದಿಂಚು ಭೂಮಿಯನ್ನು ಬಿಡಲ್ಲ. ಮಹಾರಾಷ್ಟ್ರದ ಖ್ಯಾತೆಗೆ ಅರ್ಥವಿಲ್ಲ ಎಂದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
Minister K S Eshwarappa on Deputy CM Post in Karnataka.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422