ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 MAY 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಬಹಿರಂಗ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಾವಿಗೆ ಕಾಂಗ್ರೆಸ್ ಪಕ್ಷವೆ ಕಾರಣ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.
ಸಚಿವ ಕೆ.ಎಸ್.ಈಶ್ವರಪ್ಪ ಅವರು ಎರಡು ಅಂಶಗಳನ್ನು ಒಳಗೊಂಡ ಪತ್ರ ಬರೆದಿದ್ದಾರೆ. ಇದರಲ್ಲಿ ಪ್ರಮುಖವಾಗಿ ಕೋವಿಡ್ ಲಸಿಕೆ ಮತ್ತು ಅದರ ನಿರ್ವಹಣೆ ಸಂಬಂಧ ಪ್ರಸ್ತಾಪಿಸಿದ್ದಾರೆ.
ವಿಷಯ 1 : ಬಿಜೆಪಿಗೊಂದು, ಕಾಂಗ್ರೆಸ್ಗೊಂದು ಸಂವಿಧಾನವಾ?
ಕೋವಿಡ್ ಸಂಬಂಧ ಸಭೆ ನಡೆಸಲು ಅವಕಾಶ ನೀಡುತ್ತಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು. ಇದಕ್ಕೆ ಪತ್ರದಲ್ಲಿ ಉತ್ತರ ನೀಡಿರುವ ಸಚಿವ ಕೆ.ಎಸ್.ಈಶ್ವರಪ್ಪ, ತಾವು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕನಾಗಿದ್ದ ಸಂದರ್ಭ, ಬರಗಾಲದ ಪರಿಸ್ಥಿತಿ ಚರ್ಚೆಗೆ ಜಿಲ್ಲೆಗಳಿಗೆ ಭೇಟಿ ನೀಡಿದ್ದೆ. ಆಗ ಅಧಿಕಾರಿಗಳ ಸಭೆ ನಡೆಸಲು ಅವಕಾಶ ನೀಡಿರಲಿಲ್ಲ. ತಾವು ತಂಗಿದ್ದ ಪ್ರವಾಸಿ ಮಂದಿರದಲ್ಲೇ ಅನೌಪಚಾರಿಕವಾಗಿ ಅಧಿಕಾರಿಗಳ ಸಭೆ ನಡೆಸಬೇಕಾಯಿತು. ಆಗ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದರು. ಈಗಲು ಅದೆ ಅಧಿಕಾರಿಗಳಿದ್ದಾರೆ. ಕಾಂಗ್ರೆಸ್ಗೊಂದು, ಬಿಜೆಪಿಗೊಂದು ಸಂವಿಧಾನವಿದೆಯಾ ಎಂದು ಪ್ರಶ್ನಿಸಿದರು.
ವಿಷಯ 2 : ಕೋವಿಡ್ ಲಸಿಕೆ ವಿರುದ್ಧ ಅಪಪ್ರಚಾರ
ಕರೋನ ಲಸಿಕೆ ನೀಡುವಲ್ಲಿ ವಿಫಲವಾಗಿದೆ. ಸರ್ಕಾರ ಸತ್ತು ಹೋಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ರಾಜಸ್ಥಾನ, ಪಂಜಾಬ್ನಲ್ಲಿ ಕಾಂಗ್ರೆಸ್ ಸರ್ಕಾರವೆ ಇದೆ. ಅಲ್ಲಿ ಎಲ್ಲರಿಗೂ ಲಸಿಕೆ ನೀಡಿದ್ದಾರಾ? ಹಾಗಾದರೆ ಅಲ್ಲಿ ಸರ್ಕಾರ ಸುತ್ತು ಹೋಗಿದೆಯಾ ಎಂದು ಪ್ರಶ್ನಿಸಿ ಎಂದು ಪತ್ರದಲ್ಲಿ ತಿರುಗೇಟು ನೀಡಿದ್ದಾರೆ.
ಲಸಿಕೆ ಬಗ್ಗೆ ಕಾಂಗ್ರೆಸ್ ಮುಖಂಡರು ಅಪಪ್ರಚಾರ ನಡೆಸಿದರು. ಇದರಿಂದ ಜನರು ಲಸಿಕೆ ಹಾಕಿಸಿಕೊಳ್ಳದಂತಾಯಿತು. ಇದೆ ಕಾರಣಕ್ಕೆ ಕರೋನ ವ್ಯಾಪಕವಾಗಿ ಹರಡುತ್ತಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪುತ್ತಿದ್ದಾರೆ. ಈಗ ಕೋವಿಡ್ನಿಂದ ಆಗುತ್ತಿರುವುದು ಬರಿ ಸಾವುಗಳಲ್ಲ, ಅದು ಕೊಲೆ. ಈ ಕೊಲೆಗಳಿಗೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಸಚಿವ ಈಶ್ವರಪ್ಪ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಬಹಿರಂಗ ಪತ್ರದ ಕುರಿತು ಮಾತನಾಡಿದ ಸಚಿವ ಈಶ್ವರಪ್ಪ, ಸಿದ್ದರಾಮಯ್ಯ ಅವರು ಪತ್ರ ಬಂದೆ ಇಲ್ಲ ಎಂದು ಹೇಳಬಾರದು. ಆ ಕಾರಣಕ್ಕೆ ಪತ್ರವನ್ನು ಬಹಿರಂಪಡಿಸಲಾಗುತ್ತಿದೆ ಎಂದು ತಿಳಿಸಿದರು.
ಪ್ರಮುಖರಾದ ದತ್ತಾತ್ರಿ, ಡಿ.ಎಸ್.ಅರುಣ್, ಅಣ್ಣಪ್ಪ, ಎಸ್.ಎನ್.ಚನ್ನಬಸಪ್ಪ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]