‘ಬಿಜೆಪಿಯನ್ನು ನಂಬಿ ಬಂದಿರುವ 18 ಅಳಿಯಂದಿರನ್ನು ಮಧ್ಯದಲ್ಲೇ ಕೈ ಬಿಡಲು ಆಗುತ್ತದಾ?’

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 5 ಆಗಸ್ಟ್ 2019

ನಮ್ಮ ಪಕ್ಷಕ್ಕೆ 18 ಅಳಿಯಂದಿರು ಬೇರೆ ಬಂದಿದ್ದಾರೆ. ಅವರನ್ನು ತೃಪ್ತಿಪಡಿಸಬೇಕಿದೆ. ನಮ್ಮನ್ನು ನಂಬಿ ಬಂದವರನ್ನು ಅರ್ಧಕ್ಕೆ ಕೈ ಬಿಡಬಾರದಲ್ಲ. ಸಂಪುಟ ರಚನೆ ಕುರಿತು ಪತ್ರಕರ್ತರ ಪ್ರಶ್ನೆಗೆ ಶಾಸಕ ಕೆ.ಎಸ್.ಈಶ್ವರಪ್ಪ ನೀಡಿದ ಉತ್ತರ ಇದು.

67509029 897152903979464 9202488363968364544 n.jpg? nc cat=107& nc oc=AQkaeADgXBjanyaVtotO0LXgyJkoNRSoao F3iiBrDs Fbf1qrjQGiZQMjACeauIT8c& nc ht=scontent.fblr1 3

ಗೋವಿಂದಾಪುರದಲ್ಲಿ ಆಶ್ರಯ ಮನೆಗಳ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಈಶ್ವರಪ್ಪ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಇನ್ನೊಂದು ವಾರದಲ್ಲಿ ಸಚಿವ ಸಂಪುಟ ರಚನೆಯಾಗಲಿದೆ. 18 ಶಾಸಕರು ನಮ್ಮ ಪಕ್ಷಕ್ಕೆ ಬಂದಿದ್ದಾರೆ. ಅವರಿಗೆ ಆದ್ಯತೆ ನೀಡಬೇಕಿದೆ. ಸಮ್ಮಿಶ್ರ ಸರ್ಕಾರ ಸರಿಯಾಗಿ ನಡೆಯುತ್ತಿಲ್ಲ ಎಂದು ಅಲ್ಲಿಂದ ಹೊರಗೆ ಬಂದಿದ್ದಾರೆ. ಅವರನ್ನು ಮೊದಲು ತೃಪ್ತಿಪಡಿಸಬೇಕಿದೆ ಎಂದರು.

ಒಬ್ಬರೇ ಸಿಎಂ ನೋಡಿ ಹೇಗೆಲ್ಲ ಕೆಲ ಮಾಡ್ತಾರೆ

ಇನ್ನು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಈಶ್ವರಪ್ಪ, ಈ ಹಿಂದೆ ಸರ್ಕಾರವೇ ಇರಲಿಲ್ಲ. ಈಗ ಒಬ್ಬರೆ ಮುಖ್ಯಮಂತ್ರಿ ಹೇಗೆ ಕೆಲಸ ಮಾಡುತ್ತಿದ್ದಾರೆ. ಅತಿವೃಷ್ಟಿಯಾದ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ, ಆ ಜನರಲ್ಲಿ ಭರವಸೆ ಮೂಡಿಸಿದ್ದಾರೆ. ರಾಜ್ಯದ ಕೆಲವು ಭಾಗದಲ್ಲಿ ಬರವಿದೆ. ಇನ್ನು ಕೆಲವು ಭಾಗದಲ್ಲಿ ಅತಿವೃಷ್ಟಿಯಾಗಿದೆ. ಇವತ್ತು ದೆಹಲಿಗೆ ತೆರಳುತ್ತಿರುವ ಸಿಎಂ ಯಡಿಯೂರಪ್ಪ ಅವರು ರಾಜ್ಯಕ್ಕೆ ಕೇಂದ್ರದಿಂದ ನೆರವು ತರಲಿದ್ದಾರೆ ಎಂದರು.

ಮೇಯರ್ ಲತಾ ಗಣೇಶ್, ಉಪ ಮೇಯರ ಚನ್ನಬಸಪ್ಪ, ಪಾಲಿಕೆ ಆಡಳಿತ ಪಕ್ಷದ ನಾಯಕ ಜ್ಞಾನೇಶ್ವರ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment