‘ತೊಟ್ಟಿಯಲ್ಲಿರುವ ಕಸದಂತಾಗಿದೆ ಸಿದ್ದರಾಮಯ್ಯ ಪರಿಸ್ಥಿತಿ, ಅವರಿಗೆ ತಲೆ ಕೆಟ್ಟಿದೆ, ಮೊದಲು ರಾಜೀನಾಮೆ ನೀಡಲಿ’

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 APRIL 2021

ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರು ಲೆಕ್ಕದಲ್ಲೂ ಇಲ್ಲ, ಬುಕ್‍ನಲ್ಲೂ ಇಲ್ಲ. ತೊಟ್ಟಿಯಲ್ಲಿರುವ ಕಸದಂತಾಗಿದೆ ಸಿದ್ದರಾಮಯ್ಯ ಅವರ ಪರಿಸ್ಥಿತಿ. ಹಾಗಾಗಿ ಮೊದಲು ಅವರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದರು. ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರು ಮೇಯರ್, ಉಪ ಮೇಯರ್ ಚುನಾವಣೆ ಸಂದರ್ಭ,  ತಮ್ಮ ಮಾತು ಕೇಳಲಿಲ್ಲ ಎಂದು ನಾಲ್ಕು ದಿನ ಹೋಗಿ ರೆಸಾರ್ಟ್‍ನಲ್ಲಿ ಕೂತಿದ್ದರು. ಸಿದ್ದರಾಮಯ್ಯ ಅವರಿಗೆ ಅನ್ಯಾಯವಾಗಿದೆ ಎಂದು ರಮೇಶ್ ಕುಮಾರ್ ಅವರೂ ಹೇಳಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರ ಸ್ಥಿತಿ ಹೇಗಿದೆ ಅಂದರೆ ತೊಟ್ಟಿಯಲ್ಲಿರುವ ಕಸದಂತಾಗಿದೆ. ಹಾಗಾಗಿ ಮೊದಲು ಅವರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಸಿದ್ದರಾಮಯ್ಯಗೆ ಹುಚ್ಚು ಹಿಡಿದಿದೆ

ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ಸಿದ್ದರಾಮಯ್ಯ ಅವರಿಗೆ ಹುಚ್ಚು ಹಿಡಿದಿದೆ. ಕರ್ನಾಟಕದಲ್ಲಿ ಇಷ್ಟೊಂದು ಅಭಿವೃದ್ಧಿ ಆಗುತ್ತಿರುವುದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ.  ಇದರಿಂದ ಸಿದ್ದರಾಮಯ್ಯ ಅವರಿಗೆ ತಲೆಕೆಟ್ಟು ಹೋಗಿದೆ ಎಂದು ಆರೋಪಿಸಿದರು.

ಬೆಂಗಳೂರಿಗೆ ಹೋಗಿ ಪಟ್ಟಿ ಕೊಡುತ್ತೇನೆ

ಅಧಿಕಾರಿಗಳು ಮಾತು ಕೇಳುತ್ತಿಲ್ಲ, ಸಚಿವರು ಮಾತು ಕೇಳುತ್ತಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ನಾಳೆಯೋ, ನಾಡಿದ್ದೋ ಬೆಂಗಳೂರಿಗೆ ಹೋಗುತ್ತೇನೆ. ಸ್ವಾತಂತ್ರ್ಯ ನಂತರ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಏನೇನು ಆಗಿರಲಿಲ್ಲ, ಈಗ ಏನೇನು ಆಗಿದೆ ಅನ್ನುವದರ ಪಟ್ಟಿ ಕೊಡುತ್ತೇನೆ. ನಾವು, ನಮ್ಮ ಅಧಿಕಾರಿಗಳು ಏನೆಲ್ಲ ಕೆಲಸ ಮಾಡಿದ್ದೇವೆ ಎಂದು ತಿಳಿಸುತ್ತೇನೆ ಎಂದರು

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

Leave a Comment