‘ಅವರು ಮಾತ್ರವಲ್ಲ ಸಿದ್ದರಾಮಯ್ಯ, ದೇವೇಗೌಡರು ಕೂಡ ಬಿಜೆಪಿ ಸೇರಿದರೆ ಆಶ್ಚರ್ಯವಿಲ್ಲ’

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 17 ಸೆಪ್ಟೆಂಬರ್ 2019

ಸಾಯೋ ಪಾರ್ಟಿ, ಮುಳುಗೋ ಹಡಗಿನಲ್ಲಿ ಯಾರು ಇರಲು ಇಷ್ಟಪಡುವುದಿಲ್ಲ. ಹಾಗಾಗಿ ದೇವೇಗೌಡರು, ಸಿದ್ದರಾಮಯ್ಯ ಅವರು ಬಿಜೆಪಿ ಸೇರಿದರು ಆಶ್ಚರ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರಪ್ಪ, ಜಿ.ಟಿ.ದೇವೇಗೌಡ ಅವರು ಮಾತ್ರವಲ್ಲ, ಸಾಯೋ ಪಾರ್ಟಿ, ಮುಳುಗೋ ಹಡಗಿನಲ್ಲಿ ಯಾರು ಇರಲು ಇಷ್ಟಪಡುವುದಿಲ್ಲ ಎಂದರು.

ಇಂತಾ ಪರಿಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು

Kalleshwara-Enterprises.webp

ಕೆಜೆಪಿ, ಬಿಜೆಪಿ ವೋಟು ಹಂಚಿಕೆಯಿಂದಾಗಿ ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಇಲ್ಲವಾಗಿದ್ದರೆ ಸಿದ್ದರಾಮಯ್ಯ ಎಲ್ಲಿದ್ದಾರೆ ಎಂದು ಹುಡುಕಬೇಕಿತ್ತು ಎಂದು ಈಶ್ವರಪ್ಪ ಲೇವಡಿ ಮಾಡಿದರು. ಸಿದ್ದರಾಮಯ್ಯ ಅವರು ತಮ್ಮದೆ ಕ್ಷೇತ್ರದಲ್ಲಿ 36 ಸಾವಿರ ಮತಗಳ ಅಂತರದಲ್ಲಿ ಸೋತಿದ್ದಾರೆ. ಮುಖ್ಯಮಂತ್ರಿ ಸ್ಥಾನವನ್ನು ಕಳೆದುಕೊಂಡಿದ್ದಾರೆ. ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ವಿಲವಿಲ ಒದ್ದಾಡುತ್ತಿದ್ದಾರೆ. ಸಿದ್ದರಾಮಯ್ಯಗೆ ಇಂತಾ ಪರಿಸ್ಥಿತಿ ಬರಬಾರದಿತ್ತು ಎಂದು ವ್ಯಂಗ್ಯ ಮಾಡಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment