ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಜನವರಿ 2022
ಕಾಂಗ್ರೆಸ್ ನವರ ಈ ಪಾದಯಾತ್ರೆಯಿಂದ ಜನರಿಗೆ ಒಳ್ಳೆಯದಾಗುವುದಿಲ್ಲ. ನೀರು ಸಿಗಲ್ಲ ಆದರೆ ಕೋವಿಡ್ ಸಿಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ತಾನು ಚಾಂಪಿಯನ್ ಆಗಬೇಕು, ಸಿಎಂ ಅಗಬೇಕು ಎನ್ನುವ ಲೆಕ್ಕದಲ್ಲಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಿಗೂ ಕೋವಿಡ್ ಹೆಚ್ಚುವ ಅಧಿಕಾರವನ್ನು ಸೋನಿಯಾ ಗಾಂಧಿ ಕೊಟ್ಟರಾ? ನೀವು ಸಿಎಂ ಆಗುವ ಭ್ರಮೆಯಲ್ಲಿ ರಾಜ್ಯದ ಜನರಿಗೆ ಕೋವಿಡ್ ಹರಡುವ ಪ್ರಯತ್ನ ಒಳ್ಳೆಯದು ಮಾಡಲ್ಲ. ಮೊದಲನೆಯದಾಗಿ ನೀವು ಸಿಎಂ ಆಗುವುದೇ ಕನಸು ಎಂದು ವ್ಯಂಗ್ಯವಾಡಿದರು.
ನೀರು ಕೊಡುವ ಬದಲು ರಾಜ್ಯದ ಜನರಿಗೆ ಕೋವಿಡ್ ಕೊಡುವ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಜ್ವರ ಅಂತಾ ಸುಸ್ತಾಗಿ ವಾಪಾಸ್ ಬಂದಿದ್ದಾರೆ. ಅವರು ಯಾವುದೇ ಪಕ್ಷದವರು ಇರಬಹುದು. ಆರೋಗ್ಯ ಬಹಳ ಮುಖ್ಯ. ಇದೇ ಉದ್ದೇಶದಿಂದಲೇ ಕಾಂಗ್ರೆಸ್ ನವರಿಗೆ ಪ್ರಾರ್ಥನೆ ಮಾಡುತ್ತಾ ಬಂದಿದ್ದೇನೆ. ಅವರಿಗೆ ರಾಜಕೀಯವೇ ಮುಖ್ಯವಾಗಿದೆ. ರಾಜ್ಯದ ಜನರಿಗೆ ಕೋವಿಡ್ ಹರಡುವುದನ್ನು ನಾನು ಖಂಡಿಸುತ್ತೇನೆ ಎಂದರು.
ಟಿಕೆಟ್’ಗಾಗಿ ಶೋ ಕೊಡಲು ಹೋಗಿದ್ದಾರೆ
ಮೇಕೆದಾಟು ಹೆಸರಿನಲ್ಲಿ ಮಾಡುತ್ತಿರುವ ರಾಜಕಾರಣದಲ್ಲಿ ಜನಜಾತ್ರೆಯಾಗುತ್ತಿದೆ. ಜಿ.ಪಂ., ತಾಪಂ, ಅಸೆಂಬ್ಲಿ ಚುನಾವಣೆ ಟಿಕೆಟ್ ಗಾಗಿ ಡಿಕೆ ಶಿವಕುಮಾರ್ ಮುಂದೆ ಶೋ ತೋರಿಸಲು ಹೋಗಿದ್ದಾರೆ. ಇಂತಹ ಭ್ರಮೆಯಲ್ಲಿ ಏಳೆಂಟು ಸಾವಿರ ಜನರು ರಾಜ್ಯದ ಎಲ್ಲಾ ಭಾಗದಿಂದ ಹೋಗಿದ್ದಾರೆ. ಪಾದಯಾತ್ರೆಗೆ ಹೋಗಿ ಬಂದವರು ಇಡೀ ರಾಜ್ಯಕ್ಕೆ ಕೋವಿಡ್ ಹಚ್ಚುತ್ತಾರೆ. ಸ್ವತಃ ಡಿ.ಕೆ.ಶಿವಕುಮಾರ್ ಮಾಸ್ಕ್ ಹಾಕುತ್ತಿಲ್ಲ. ಅಂತರ ಇಲ್ಲ. ನೀತಿ- ನಿಯಮ ಪಾಲಿಸುತ್ತಿಲ್ಲ. ಇದರ ಮಧ್ಯ ಅರೇಸ್ಟ್ ಮಾಡ್ಕೋಳ್ಳಿ ಎಂದು ಪೌರುಷದ ಮಾತು ಬೇರೆ ಆಡುತ್ತಾರೆ ಎಂದು ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು
ನಂದಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಮ್ಮನೆ ರತ್ನಾಕರ್ ಅವರ ಪತ್ರಿಕಾ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಈಶ್ವರಪ್ಪ ಅವರು ನಂದಿತ ಆತ್ಮಹತ್ಯೆ ಪ್ರಕರಣ ನಡೆದಿದ್ದು, ಕಿಮ್ಮನೆ ರತ್ನಾಕರ್ ಸಚಿವರಾಗಿದ್ದಾಗಲೆ. ಹಾಗಾಗಿ ಅವರೇ ಏಕೆ ಸಿಬಿಐಗೆ ಅಂದು ಕೊಡಲಿಲ್ಲ. ಇಂದೇಕೆ ಒತ್ತಾಯಿಸುತ್ತಿದ್ದಾರೊ ಗೊತ್ತಿಲ್ಲ. ಮೊದಲು ಅದಕ್ಕೆ ಉತ್ತರ ಕೊಡಲಿ ಎಂದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200