ಶಿವಮೊಗ್ಗ ಲೈವ್.ಕಾಂ |SHIMOGA NEWS | 17 NOVEMBER 2020
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ವಿರುದ್ಧ ಟೀಕೆ ಮಾಡಿದ್ದ ಕಾಂಗ್ರೆಸ್ ಪಕ್ಷ ದೇಶದಲ್ಲಿ ಮೂಲೆಗುಂಪಾಗಿದೆ. ಆರ್‍ಎಸ್‍ಎಸ್ ವಿರುದ್ಧ ಟೀಕೆ ಮಾಡಿದರೆ ಧೂಳಾಗಿ ಹೋಗುತ್ತೆ ಅಂತಾ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಸಿದ್ದರಾಮಯ್ಯ ಅವರು ಆರ್‍ಎಸ್‍ಎಸ್ ಅನ್ನು ಜಾತಿವಾದಿ ಸಂಘಟನೆ ಅಂದಿದ್ದಾರೆ. ಬಿ.ಕೆ.ಹರಿಪ್ರಸಾದ್ ಅವರು ಆರ್‌ಎಸ್ಎಸ್‍ನವರಿಗೆ ರಾಷ್ಟ್ರಧ್ವಜ ಹಾರಿಸಲು ಅರ್ಹತೆ ಇಲ್ಲ ಎಂದಿದ್ದಾರೆ. ಇವರಿಬ್ಬರಿಗೆ ಆರ್‍ಎಸ್‍ಎಸ್ ಬಗ್ಗೆ ತಿಳಿವಳಿಕೆಯೇ ಇಲ್ಲ ಎಂದರು.
ಸೋನಿಯಾ ಮೆಚ್ಚಿಸಲು ಹೇಳಿಕೆ
ಸಿದ್ದರಾಮಯ್ಯ ಮತ್ತು ಬಿ.ಕೆ.ಹರಿಪ್ರಸಾದ್ ಅವರ ವಿರುದ್ಧ ಹಗುರವಾಗಿ ಹೇಳಿಕೆ ನೀಡಬಹುದು. ಆದರೆ ಆರ್‌ಎಸ್‍ಎಸ್ ನಮಗೆ ಆ ಸಂಸ್ಕೃತಿ ಕಲಿಸಿಲ್ಲ. ಸೋನಿಯಾ ಗಾಂಧಿ ಅವರನ್ನು ಮೆಚ್ಚಿಸುವ ಸಲುವಾಗಿ ಹೇಳಿಕೆ ನೀಡಿರಬಹುದು. ಆದರೆ ಕಾಂಗ್ರೆಸ್‍ನ ಎಷ್ಟೋ ನಾಯಕರ ಮಕ್ಕಳು ಆರ್‍ಎಸ್‍ಎಸ್‍ಗೆ ಬರುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರವನ್ನು ನಡೆಸುತ್ತಿದ್ದಾರೆ ಎಂದರು.
ಗಾಂಧೀಜಿ, ಪ್ರಣಬ್ ಬಂದಿದ್ದರು
ಮಹಾತ್ಮ ಗಾಂಧೀಜಿ ಅವರು ಒಮ್ಮೆ ಆರ್‌ಎಸ್‍ಎಸ್ ಕ್ಯಾಂಪ್‍ಗೆ ಬಂದಿದ್ದರು. ರಾಷ್ಟ್ರಪತಿ ಆಗಿದ್ದ ಪ್ರಣಬ್ ಮುಖರ್ಜಿ ಅವರು ಕೂಡ ಆರ್‍ಎಸ್‍ನ ಕ್ಯಾಂಪ್‍ಗೆ ಬಂದಿದ್ದರು. ಚುನಾವಣೆಗಳ ಸೋಲಿನಿಂದ ಹತಾಶಗೊಂಡಿರುವ ಸಿದ್ದರಾಮಯ್ಯ ಅವರು ಆರ್‍ಎಸ್‍ಎಸ್ ವಿರುದ್ಧ ಮಾತಾಡುತ್ತಿದ್ದಾರೆ ಎಂದು ಆರೋಪಿಸಿದರು.
ಬುಕ್ಸ್ ಇದೆ ಓದಿ ತಿಳಿದುಕೊಳ್ಳಲಿ
ಸಿದ್ದರಾಮಯ್ಯ, ಹರಿಪ್ರಸಾದ್ ಅವರು ಆರ್‍ಎಸ್‍ಎಸ್ ಕುರಿತು ತಿಳಿದುಕೊಳ್ಳುವ ಅವಶ್ಯಕತೆ ಇದೆ. ಆಸಕ್ತಿ ಇದ್ದರೆ ಸಂಘದ ಬಗ್ಗೆ ಇರುವ ಪುಸ್ತಕಗಳನ್ನು ಕಳುಹಿಸಿಕೊಡುತ್ತೇನೆ ಎಂದು ಈಶ್ವರಪ್ಪ ತಿಳಿಸಿದರು.
ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಕಾರ್ಪೊರೇಟರ್‌ಗಳಾದ ಚನ್ನಬಸಪ್ಪ, ಸುನಿತಾ ಅಣ್ಣಪ್ಪ, ಪ್ರಮುಖರಾದ ದತ್ತಾತ್ರಿ, ಎಸ್.ನಾಗರಾಜ್, ಬಳ್ಳೆಕೆರೆ ಸಂತೋಷ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200