SHIVAMOGGA LIVE NEWS | 15 MARCH 2024
SHIMOGA : ಲೋಕಸಭೆ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನಿರ್ಧಾರ ಪ್ರಕಟಿಸಿದ್ದಾರೆ.
ಬಂಜಾರ ಸಮುದಾಯ ಭವನದಲ್ಲಿ ನಡೆದ ಅಭಿಪ್ರಾಯ ಸಂಗ್ರಹಣಾ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಿದ್ದಾರೆ. ತಮ್ಮದು ಆತುರದ ನಿರ್ಧಾರವಲ್ಲ. ಇದು ಮೋದಿ ವಿರೋಧಿ ನಡೆಯಲ್ಲ. ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಗಬಾರದು. ಹಿಂದುತ್ವಕ್ಕೆ, ಕಾರ್ಯಕರ್ತರಿಗೆ ಅನ್ಯಾಯವಾಗಬಾರದು ಎಂದು ಈ ನಿರ್ಧಾರ ಎಂದು ಈಶ್ವರಪ್ಪ ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗ ಕಾಂಗ್ರೆಸ್ ಕಚೇರಿ ಮುಂಭಾಗ ಕಾರ್ಯಕರ್ತರಿಂದಲೇ ಹೋರಾಟ, ಮಧು ಬಂಗಾರಪ್ಪ ವಿರುದ್ಧ ಆಕ್ರೋಶ