SHIVAMOGGA LIVE NEWS | 11 APRIL 2024
SHIMOGA : ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಸ್. ಈಶ್ವರಪ್ಪ ಅವರು ಏ.12 ರಂದು ನಾಮಪತ್ರ ಸಲ್ಲಿಸಲಿದ್ದಾರೆ. 25 ಸಾವಿರಕ್ಕೂ ಹೆಚ್ಚು ಬೆಂಬಲಿಗರು ಇದಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ ಇ. ವಿಶ್ವಾಸ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವಾಸ್, ಬೆಳಿಗ್ಗೆ 10 ಗಂಟೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್‌ನ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಸೀನಪ್ಪಶೆಟ್ಟಿ ವೃತ್ತಕ್ಕೆ ಬಂದು ಸಭೆ ನಡೆಸಲಾಗುವುದು. ನಂತರ ನಾಮಪತ್ರ ಸಲ್ಲಿಸುವರು. ಬೈಂದೂರು ಸೇರಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಎಲ್ಲೆಡೆಯಿಂದ ರಾಷ್ಟ್ರಭಕ್ತರು ಬರಲಿದ್ದಾರೆ ಎಂದರು.
ಈಶ್ವರಪ್ಪ ಅವರನ್ನು ದೆಹಲಿಗೆ ಬರಲು ತಿಳಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು, ಕೊನೆಗೆ ಭೇಟಿಗೆ ಅವಕಾಶ ನೀಡದೆ ಅವಮಾನ ಮಾಡಿದ್ದಾರೆ. ಅಮಿತ್ ಷಾ ಅವರಿಗಿಂತ ಈಶ್ವರಪ್ಪ ಅವರು ವಯಸ್ಸಿನಲ್ಲಿ ಮತ್ತು ರಾಜಕಾರಣದಲ್ಲಿ ಹಿರಿಯರು. ಭೇಟಿಗೆ ಅವಕಾಶ ಕೊಡದ ಮೇಲೆ ದೆಹಲಿಗೆ ಕರೆಸಿಕೊಂಡಿದ್ದೇಕೆ ಎಂದು ವಿಶ್ವಾಸ್ ಪ್ರಶ್ನಿಸಿದರು.
ಸುದ್ದಿಗೋಷ್ಠಿಯಲ್ಲಿ ಶಂಕರ್ ಗನ್ನಿ, ಏಳು ಮಲೈ ಬಾಬು, ಸುವರ್ಣಾ ಶಂಕರ್, ಬಾಲು, ಲಕ್ಷ್ಮೀ ಶಂಕರನಾಯ್ಕ, ಆರತಿ ಆ.ಮ.ಪ್ರಕಾಶ್, ರಾಜು, ರವಿ, ಚಿದಾನಂದ ಇದ್ದರು.
ಇದನ್ನೂ ಓದಿ – ‘ಓಂ ಶಕ್ತಿ’ ಬೆಂಬಲ ಯಾರಿಗೆ? ಸ್ಪಷ್ಟನೆ ನೀಡಿದ ದೇಗುಲದ ಟ್ರಸ್ಟಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200