ಶಿವಮೊಗ್ಗ ಲೈವ್.ಕಾಂ | 02 ಏಪ್ರಿಲ್ 2019
ಮೈತ್ರಿ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಲು ಡಿ.ಕೆ.ಶಿವಕುಮಾರ್ ಮತ್ತೆ ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಈ ನಡುವೆ ಬಿಜೆಪಿ ಕೂಡ ಸ್ಟಾರ್ ಕ್ಯಾಂಪೇನರ್’ಗಳನ್ನು ಕ್ಷೇತ್ರಕ್ಕೆ ಕರೆಸಿಕೊಳ್ಳುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಕೂಡ ಶಿವಮೊಗ್ಗ ಟೂರ್ ಮಾಡುವ ಸಾಧ್ಯತೆ ಇದೆ.
ಐದು ದಿನ ಶಿವಮೊಗ್ಗದಲ್ಲೇ ಡಿಕೆಶಿ ಮೊಕ್ಕಾಂ
ಶಿವಮೊಗ್ಗ ಕ್ಷೇತ್ರದಲ್ಲಿ ಈಗಾಗಲೇ ಎರಡು ದಿನ ಕ್ಯಾಂಪೇನ್ ಮಾಡಿದ ಸಚಿವ ಡಿ.ಕೆ.ಶಿವಕುಮಾರ್, ಮತ್ತೊಂದು ಸುತ್ತಿನ ಪ್ರಚಾರಕ್ಕೆ ಪ್ಲಾನ್ ಮಾಡಿಕೊಂಡಿದ್ದಾರೆ. ಈ ಬಾರಿ ಡಿ.ಕೆ.ಶಿವಕುಮಾರ್ ಅವರು ಐದು ದಿನ ಜಿಲ್ಲೆಯಲ್ಲೇ ಮೊಕ್ಕಾಂ ಹೂಡಲಿದ್ದಾರೆ. ಏಪ್ರಿಲ್ 18 ರಿಂದ 22ರವರೆಗೆ ಜಿಲ್ಲೆಯಲ್ಲೇ ಉಳಿಯಲಿದ್ದಾರೆ ಅಂತಾ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ ತಿಳಿಸಿದ್ದಾರೆ.

ಶಿವಮೊಗ್ಗಕ್ಕೆ ಬರ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು
ಮತ್ತೊಂದೆಡೆ ಬಿಜೆಪಿ ಕೂಡ ಭರ್ಜರಿ ಕ್ಯಾಂಪೇನ್’ಗೆ ಪ್ಲಾನ್ ಮಾಡಿಕೊಂಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದೆ. ಅವರ ಪ್ರಚಾರಕ್ಕೆ ಸಿದ್ಧತೆಗಳು ನಡೆಯುತ್ತಿದೆ. ಇನ್ನು, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 18ರಿಂದ ಕ್ಯಾಂಪೇನ್ ಜೋರಾಗಲಿದೆ. ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ಪ್ರಮುಖರು ಶಿವಮೊಗ್ಗ ಜಿಲ್ಲೆಯಾದ್ಯಂತ ರಾಘವೇಂದ್ರ ಪರವಾಗಿ ಪ್ರಚಾರ ಕೈಗೊಳ್ಳಲಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200