ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 30 APRIL 2024
ELECTION NEWS : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲ ಸೂಚಿಸಿದೆ. ಸಚಿವ ಮಧು ಬಂಗಾರಪ್ಪ ನಿವಾಸದಲ್ಲಿ ಮಂಡಳಿಯ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಸುದ್ದಿಗೋಷ್ಠಿ ನಡೆಸಿ, ಗೀತಾ ಶಿವರಾಜ್ ಕುಮಾರ್ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಯಾರೆಲ್ಲ ಏನೇನು ಹೇಳಿದರು?
- ಎನ್.ಎಂ.ಸುರೇಶ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ
ಶಿಕಾರಿಪುರ ತಾಲೂಕಿನಿಂದ ಬರಿಗೈಲಿ ಬೆಂಗಳೂರಿಗೆ ಹೋಗಿದ್ದ ನಾನು ಈಗ ವಾಣಿಜ್ಯ ಮಂಡಳಿ ಅಧ್ಯಕ್ಷನಾಗಿದ್ದೇನೆ. ಇದಕ್ಕೆ ಡಾ. ರಾಜ್ಕುಮಾರ್ ಅವರ ಕುಟುಂಬ ಕಾರಣ. ಚಿತ್ರರಂಗಕ್ಕೆ ಅವರ ಕುಟುಂಬದ ಸೇವೆ ಅನನ್ಯ. ಇದೇ ಕಾರಣಕ್ಕೆ ಎಲ್ಲರು ಸ್ವಯಂ ಪ್ರೇರಿತವಾಗಿ ಗೀತಾ ಶಿವರಾಜ್ ಕುಮಾರ್ ಅವರ ಬೆಂಬಲಕ್ಕೆ ಬಂದಿದ್ದೇವೆ. ಬಂಗಾರಪ್ಪ ಪುತ್ರಿ ಗೀತಾ ಅವರ ರಕ್ತದಲ್ಲಿಯೇ ರಾಜಕಾರಣವಿದೆ. ಅವರಿಗೆ ಜಯ ಸಿಗಲಿದೆ.
- ಸಾ.ರಾ.ಗೋವಿಂದು, ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ
ಬಂಗಾರಪ್ಪ ಮುಖ್ಯಮಂತ್ರಿ ಆಗಿದ್ದಾಗ ತಮಿಳುನಾಡಿಗೆ ಕಾವೇರಿ ನೀರು ಹರಿಸದೆ ಸುಗ್ರಿವಾಜ್ಞೆ ಹೊರಡಿಸಿ ಎದೆಗಾರಿಕೆ ತೋರಿಸಿದ್ದರು. ಅವರ ಮಕ್ಕಳ ರಾಜಕಾರಣವು ಇದೇ ದಿಸೆಯಲ್ಲಿದೆ. ಚಲನಚಿತ್ರ ವಾಣಿಜ್ಯ ಮಂಡಳಿಯ ಎಲ್ಲಾ ಅಂಗ ಸಂಸ್ಥೆಗಳು ಗೀತಾ ಶಿವರಾಜ್ ಕುಮಾರ್ ಅವರಿಗೆ ಬೆಂಬಲ ಘೋಷಿಸಿವೆ. ಹಲವು ಕಲಾವಿದರು ಈಗಾಗಲೇ ಬಂದು ಪ್ರಚಾರ ನಡೆಸುತ್ತಿದ್ದಾರೆ.
ಸಚಿವ ಮಧು ಬಂಗಾರಪ್ಪ, ನಿರ್ಮಾಪಕ ಕೆ.ಪಿ.ಶ್ರೀಕಾಂತ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್, ಚಂದ್ರಭೂಪಾಲ್ ಸೇರಿದಂತೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪ್ರಮುಖರು ಇದ್ದರು.
ಇದನ್ನೂ ಓದಿ – ಈಶ್ವರಪ್ಪಗೆ ಬೆಂಬಲ ಘೋಷಿಸಿದ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ, ರಾಯಣ್ಣ ಬ್ರಿಗೇಡ್ ಸ್ಮರಿಸಿದ ಈಶ್ವರಪ್ಪ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422