ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 23 MAY 2024
SHIMOGA : ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿರುವವರನ್ನು ಆರು ವರ್ಷ ಪಕ್ಷದಿಂದ ಉಚ್ಛಾಟನೆ (Expelled) ಮಾಡಲಾಗಿದೆ. ನೈಋತ್ಯ ಪದವೀಧರರ ಕ್ಷೇತ್ರದ ಬಂಡಾಯ ಅಭ್ಯರ್ಥಿ ಶಿವಮೊಗ್ಗದ ಎಸ್.ಪಿ. ದಿನೇಶ್ ಸೇರಿದಂತೆ ಐವರನ್ನು ಉಚ್ಛಾಟಿಸಿ ಕಾಂಗ್ರೆಸ್ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಆದೇಶಿಸಿದ್ದಾರೆ.
ಯಾರನ್ನೆಲ್ಲ ಉಚ್ಛಾಟಿಸಲಾಗಿದೆ?
ನೈಋತ್ಯ ಪದವೀಧರರ ಕ್ಷೇತ್ರದ ಬಂಡಾಯ ಅಭ್ಯರ್ಥಿ ಎಸ್.ಪಿ.ದಿನೇಶ್, ಬೆಂಗಳೂರು ಪದವೀಧರರ ಕ್ಷೇತ್ರದ ಫರ್ನಾಂಡಿಸ್ ಲಾರೆನ್ಸ್, ನೈಋತ್ಯ ಶಿಕ್ಷಕರ ಕ್ಷೇತ್ರದ ಚಿಕ್ಕಮಗಳೂರಿನ ಬಿ.ಆರ್.ನಂಜೇಶ್, ಆಗ್ನೇಯ ಶಿಕ್ಷಕರ ಕ್ಷೇತ್ರದ ಚಿತ್ರದುರ್ಗದ ಲೋಕೇಶ್ ತಾಳಿಕಟ್ಟೆ, ಬೆಂಗಳೂರಿನ ವಿನೋದ್ ಶಿವರಾಜ್ ಅವರನ್ನು ಉಚ್ಛಾಟಿಸಲಾಗಿದೆ.
ಇದನ್ನೂ ಓದಿ – ಮುಖೇಶ್ ಅಂಬಾನಿ ವಿಡಿಯೋ ನೋಡಿ 20 ಲಕ್ಷ ಕಳೆದುಕೊಂಡ ಶಿವಮೊಗ್ಗ ಜಿಲ್ಲೆಯ ಉದ್ಯಮಿ, ಆಗಿದ್ದೇನು?
‘ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿ ಪಕ್ಷದ ಶಿಸ್ತು ಉಲ್ಲಂಘನೆ ಮಾಡಲಾಗಿದೆ. ಇದು ಪಕ್ಷ ವಿರೋಧಿ ಚಟುವಟಿಕೆಯಾಗಿದೆ. ಆದ್ದರಿಂದ ಕೆಪಿಸಿಸಿ ಅಧ್ಯಕ್ಷರ ಆದೇಶದ ಮೇರೆಗೆ ತಕ್ಷಣದಿಂದ ಐವರನ್ನು ಉಚ್ಛಾಟಿಸಲಾಗಿದೆʼ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422