ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಬೆಂಗಳೂರು : ರಾಜ್ಯ ಸರ್ಕಾರ ಕೈಗೆತ್ತಿಕೊಳ್ಳುತ್ತಿರುವ ಶರಾವತಿ ಭೂಗತ (ಪಂಪ್ಡ್ ಸ್ಟೋರೇಜ್) ವಿದ್ಯುತ್ ಯೋಜನೆಯಿಂದ ಪಶ್ಚಿಮಘಟ್ಟದ ಅಂದಾಜು 350 ಎಕರೆ ಅರಣ್ಯ (forest) ನಾಶ ಆಗಲಿದೆ ಎಂದು ಬಿಜೆಪಿಯ ಡಿ.ಎಸ್.ಅರುಣ್ ಸರ್ಕಾರದ ಗಮನ ಸೆಳೆದರು.
ವಿಧಾನ ಪರಿಷತ್‌ನಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಡಿ.ಎಸ್.ಅರುಣ್, ಯೋಜನೆಯಿಂದ ಶರಾವತಿ ಅಭಯಾರಣ್ಯದಲ್ಲಿನ (forest) ಸಸ್ಯ ಸಂಪತ್ತು, ವಿವಿಧ ಪ್ರಭೇದಗಳು, ಅಳಿವಿನ ಅಂಚಿನ ಪ್ರಾಣಿಗಳಿಗೂ ಕುತ್ತು ಬರಲಿದೆ. ಅಲ್ಲದೇ ಈ ಯೋಜನೆಗೆ ವ್ಯಾಪಕ ವಿರೋಧವೂ ಇದೆ ಎಂದರು.
ಬ್ಯಾಟರಿ ಎನರ್ಜಿ ಸ್ಟೋರೇಜ್ ಯೋಜನೆ

ಕೇಂದ್ರ ಸರ್ಕಾರದ ಸಹಯೋಗದಲ್ಲಿ ಪಕ್ಕದ ತಮಿಳುನಾಡು ಸರ್ಕಾರವು ಬೇಡಿಕೆ ಸಮಯದಲ್ಲಿ ಬೇಕಾಗುವ ವಿದ್ಯುತ್ ಅನ್ನು ಸಂಗ್ರಹಿಸಿಟ್ಟು ಸರಬರಾಜು ಮಾಡಲು ಬ್ಯಾಟರಿ ಎನರ್ಜಿ ಸ್ಟೋರೇಜ್ ಸಿಸ್ಟಮ್ (ಬಿಇಎಸ್‌ಎಸ್) ಯೋಜನೆ ರೂಪಿಸಿದೆ ಎಂಬ ಮಾಹಿತಿಯನ್ನು ಗಮನಕ್ಕೆ ತಂದರು.
ಸೌರಶಕ್ತಿ ಮತ್ತು ಗಾಳಿಯ ಮೂಲಕ ವಿದ್ಯುತ್ ಉತ್ಪಾದನೆ ಮಾಡಿ 500 ಮೆಗಾವಾಟ್‌ನಿಂದ 1,000 ಮೆಗಾವಾಟ್ ಸಾಮರ್ಥ್ಯದ ಬ್ಯಾಟರಿಗಳನ್ನು ವಿವಿಧ ಸಂಗ್ರಹ ಘಟಕಗಳಲ್ಲಿ ಶೇಖರಿಸಿ, ಹೆಚ್ಚು ಬೇಡಿಕೆ ಸಮಯದಲ್ಲಿ ಪೂರೈಕೆ ಮಾಡಲಾಗುತ್ತಿದೆ. ಇದರಿಂದ ವಿದ್ಯುತ್ ಖರೀದಿ ವೆಚ್ಚ ಉಳಿತಾಯವಾಗುತ್ತದೆ.
– ಡಿ.ಎಸ್.ಅರುಣ್, ವಿಧಾನ ಪರಿಷತ್ ಸದಸ್ಯ
ಪರಿಸರ ಹಾಗೂ ವನ್ಯಜೀವಿ ನೆಲೆ ನಾಶ ಮಾಡದೇ ಬ್ಯಾಟರಿ ಎನರ್ಜಿ ಸ್ಟೋರೇಜ್ ಸಿಸ್ಟಮ್ ಅಳವಡಿಸುವ ಈ ಯೋಜನೆಯನ್ನು ಕಾರ್ಯಗತಗೊಳಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಶಾಸಕರ ಪ್ರಶ್ನೆಗೆ ಸರ್ಕಾರದಿಂದ ಪೂರಕ ಉತ್ತರ ಒದಗಿಸಲಾಗುವುದು ಎಂದು ಸಭಾನಾಯಕ ಬೋಸರಾಜು ತಿಳಿಸಿದರು.

ಇದನ್ನೂ ಓದಿ » ಅಧಿಕಾರಿಗಳು ಕೆಲಸ ಮಾಡಿಕೊಡ್ತಿಲ್ವಾ? ಶಿವಮೊಗ್ಗದಲ್ಲಿ ಇವತ್ತು ಇಡೀ ದಿನ ಉಪ ಲೋಕಾಯುಕ್ತರಿಗೆ ದೂರು ಕೊಡಬಹುದು
LATEST NEWS
- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

- ಮೀನು ಮಾರುಕಟ್ಟೆ ಬಳಿ ಕಿರಿಕ್, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

- ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

About The Editor
ನಿತಿನ್ ಆರ್.ಕೈದೊಟ್ಲು















