ನಾಳೆ ಬೆಳಗ್ಗೆ ಹೆಲಿಕಾಪ್ಟರ್‌ನಲ್ಲಿ ಶಿವಮೊಗ್ಗ ಬರ್ತಿದ್ದಾರೆ ಹೆಚ್‌.ಡಿ.ಕುಮಾರಸ್ವಾಮಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 APRIL 2024

ELECTION NEWS : ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗುರುವಾರ ನಾಮಪತ್ರ ಸಲ್ಲಿಕೆ ಹಿನ್ನೆಲೆ ಮೈತ್ರಿ ಪಕ್ಷ ಜೆಡಿಎಸ್‌ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಏ.18ರಂದು ಬೆಳಗ್ಗೆ 8.30ಕ್ಕೆ ಬೆಂಗಳೂರಿನ ಹೆಚ್‌ಎಎಲ್‌ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ನಲ್ಲಿ ಹೊರಡಲಿದ್ದಾರೆ. ಬೆಳಗ್ಗೆ 9.30ಕ್ಕೆ ಶಿವಮೊಗ್ಗ ಸರ್ಕಿಟ್‌ ಹೌಸ್‌ನಲ್ಲಿರುವ ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದಾರೆ.

ಬೆಳಗ್ಗೆ 10.30ಕ್ಕೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ನಾಮಪತ್ರ ಸಲ್ಲಿಕೆ, ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಶಿವಮೊಗ್ಗದ ಸರ್ಕಿಟ್‌ ಹೌಸ್‌ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್‌ನಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಇದನ್ನೂ ಓದಿ – ಕಾಂಗ್ರೆಸ್‌ಗೆ ಗುಡ್‌ ಬೈ ಹೇಳಿದ ಸಾಗರದ ಹಕ್ರೆ ಮಲ್ಲಿಕಾರ್ಜನ್‌, ಬಿಜೆಪಿ ಸೇರ್ಪಡೆಯ ದಿನಾಂಕ ಪ್ರಕಟ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment