Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗದಲ್ಲಿ ಇಬ್ಬರು ಮಾಜಿ ಶಾಸಕರ ಪುತ್ರರಿಗೆ ಒಲಿದ ಅದೃಷ್ಟ, ಯಾರದು? ಮಾಜಿ ಎಂಎಲ್‌ಎಗಳ್ಯಾರು?

ಶಿವಮೊಗ್ಗದಲ್ಲಿ ಇಬ್ಬರು ಮಾಜಿ ಶಾಸಕರ ಪುತ್ರರಿಗೆ ಒಲಿದ ಅದೃಷ್ಟ, ಯಾರದು? ಮಾಜಿ ಎಂಎಲ್‌ಎಗಳ್ಯಾರು?

15/04/2023 3:18 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 12 APRIL 2023

ELECTION NEWS : ಕಾಂಗ್ರೆಸ್‌ ಮೂರನೆ ಪಟ್ಟಿಯಲ್ಲಿ ಇಬ್ಬರು ಮಾಜಿ ಶಾಸಕರ (Former MLA) ಮಕ್ಕಳಿಬ್ಬರಿಗೆ ಅದೃಷ್ಟ ಒಲಿದಿದೆ. ತೀವ್ರ ಕುತೂಹಲ ಕೆರಳಿಸಿರುವ ಎರಡು ಕ್ಷೇತ್ರಗಳಲ್ಲಿ ಇವರನ್ನು ಕಣಕ್ಕಿಳಿಸಲಾಗಿದೆ. ಇನ್ನು, ಶಿಕಾರಿಪುರದಲ್ಲಿ ಗೋಣಿ ಮಾಲ್ತೇಶ್‌ ಅವರಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದೆ.

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

HC-Yogesh-and-Srinivas-Kariyanna-to-congress-candidates

ಮಾಜಿ ಶಾಸಕರ ಪುತ್ರರು

ಶಿವಮೊಗ್ಗ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಕುರಿತು ತೀವ್ರ ಕುತೂಹಲ ಮೂಡಿತ್ತು. ಹಲವು ಲೆಕ್ಕಾಚಾರ, ಊಹಾಪೋಹ, ಲಾಬಿಗಳು ಕೂಡ ನಡೆದಿದ್ದವು. ಮೂರನೇ ಪಟ್ಟಿಯಲ್ಲಿ ಈ ಕುತೂಹಲಗಳಿಗೆ ತೆರೆ ಬಿದ್ದಿದೆ.

ಶಿವಮೊಗ್ಗದಿಂದ ಮಾಜಿ ಶಾಸಕ (Former MLA) ಹೆಚ್‌.ಎಂ.ಚಂದ್ರಶೇಖರಪ್ಪ ಅವರ ಪುತ್ರ ಹೆಚ್‌.ಸಿ.ಯೋಗೇಶ್‌ ಅವರನ್ನು ಕಾಂಗ್ರೆಸ್‌ ಪಕ್ಷ ಕಣಕ್ಕಿಳಿಸಿದೆ. ಹೆಚ್‌.ಎಂ.ಚಂದ್ರಶೇಖರಪ್ಪ  ಅವರು 1999ರಲ್ಲಿ ಶಿವಮೊಗ್ಗದ ಶಾಸಕರಾಗಿದ್ದರು. ಹೆಚ್‌.ಸಿ.ಯೋಗೇಶ್‌ ಅವರು ಕೂಡ ರಾಜಕಾರಣದಲ್ಲಿ ಸಕ್ರಿಯವಾಗಿದ್ದರು. ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯರಾಗಿ, ವಿರೋಧ ಪಕ್ಷದ ನಾಯಕರಾಗಿಯೂ ಜವಾಬ್ದಾರಿ ನಿಭಾಯಿಸಿದ್ದರು. ಈಗ ಅವರಿಗೆ ಟಿಕೆಟ್‌ ಘೋಷಣೆಯಾಗಿದೆ.

Nammur-News-Whatsapp

ಇನ್ನು, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಶ್ರೀನಿವಾಸ್‌ ಕರಿಯಣ್ಣ  ಅವರಿಗೆ ಟಿಕೆಟ್‌ ಘೋಷಣೆಯಾಗಿದೆ. ಇವರ ತಂದೆ ಕರಿಯಣ್ಣ ಅವರು ಶಿವಮೊಗ್ಗ ನಗರಸಭೆ ಸದಸ್ಯರಾಗಿದ್ದರು. 1989 ಮತ್ತು 1999ರಲ್ಲಿ ಹೊಳೆಹೊನ್ನೂರು ಕ್ಷೇತ್ರದಿಂದ ಶಾಸಕರಾಗಿದ್ದರು. ತಂದೆಯ ಅಪೇಕ್ಷೆಯಂತೆ, ವೈದ್ಯ ವೃತ್ತಿಗೆ ಶ್ರೀನಿವಸ್‌ ಕರಿಯಣ್ಣ, ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ರಾಜಕೀಯ ಆರಂಭಿಸಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಈ ಭಾರಿ ಪಕ್ಷ ಪುನಃ ಶ್ರೀನಿವಾಸ್‌ ಕರಿಯಣ್ಣ ಅವರನ್ನು ಕಣಕ್ಕಿಳಿಸಿದೆ.

ಅಖಾಡಕ್ಕಿಳಿದ ಗೋಣಿ ಮಾಲ್ತೇಶ್‌

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಕಾಂಗ್ರೆಸ್‌ ಪಕ್ಷದ ಗೋಣಿ ಮಾಲ್ತೇಶ್‌ ಅವರು ತೀವ್ರ ಪೈಪೋಟಿ ಒಡ್ಡಿದ್ದರು. ಯಡಿಯೂರಪ್ಪ ಅವರು 86,983 ಪಡೆದುಕೊಂಡರೆ, ಕಾಂಗ್ರೆಸ್‌ ಪಕ್ಷದ ಗೋಣಿ ಮಾಲ್ತೇಶ್‌ ಅವರು 51,586 ಮತಗಳನ್ನು ಪಡೆದಿದ್ದರು. ಈ ಬಾರಿ ಪುನಃ ಅವರನ್ನೆ ಕಾಂಗ್ರೆಸ್‌ ಕಣಕ್ಕಿಳಿಸಿದೆ.

ಇದನ್ನೂ ಓದಿ – ಶಿವಮೊಗ್ಗ, ಶಿವಮೊಗ್ಗ ಗ್ರಾಮಾಂತರ, ಶಿಕಾರಿಪುರ ಕಾಂಗ್ರೆಸ್‌ ಅಭ್ಯರ್ಥಿಗಳ ಘೋಷಣೆ

ಕಳೆದ ಬಾರಿ ಯಡಿಯೂರಪ್ಪ ಅವರಿಗೆ ಟಫ್‌ ಫೈಟ್‌ ನೀಡಿದ್ದ ಕಾಂಗ್ರೆಸ್‌ ಪಕ್ಷದ ಗೋಣಿ ಮಾಲ್ತೇಶ್‌ ಅವರು ಈ ಬಾರಿ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರ ಎದುರು ಗೆಲ್ಲುವ ಭರವಸೆಯಲ್ಲಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Congress-Party-Flag BREAKING NEWS – ಶಿವಮೊಗ್ಗ, ಶಿವಮೊಗ್ಗ ಗ್ರಾಮಾಂತರ, ಶಿಕಾರಿಪುರ ಕಾಂಗ್ರೆಸ್‌ ಅಭ್ಯರ್ಥಿಗಳ ಘೋಷಣೆ
Next Article Congress-Party-Flag ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಕಿರು ಪರಿಚಯ ಇಲ್ಲಿದೆ

ಇದನ್ನೂ ಓದಿ

140525 JNNCE engineering college in Shimoga
COLLEGE NEWSSHIVAMOGGA CITY

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್‌ ಕೋಟಾದ ಸೀಟುಗಳು ಲಭ್ಯ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/05/2025
140525 SLV Book House Sharavathi Nagara in Shimoga city
SHIVAMOGGA CITY

ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/05/2025
130525 CS Shadakshari Press meet in shimoga
SHIVAMOGGA CITY

ಶಿವಮೊಗ್ಗದಲ್ಲಿ ಮೂರು ದಿನ ರಾಜ್ಯಮಟ್ಟದ ಸ್ಪರ್ಧೆಗಳು, ಭಾಗವಹಿಸ್ತಿದ್ದಾರೆ ಸಾವಿರ ಸಾವಿರ ಸರ್ಕಾರಿ ನೌಕರರು, ಹೇಗಿದೆ ವ್ಯವಸ್ಥೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
120525-SN-Channabasappa-visits-kote-police-station.webp
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Rambapuri-Swamiji-at-mandli-in-Shimoga-city
SHIVAMOGGA CITY

ಶಿವಮೊಗ್ಗದ ಮಂಡ್ಲಿ ದೇವಸ್ಥಾನಕ್ಕೆ ರಂಭಾಪುರ ಶ್ರೀ ಭೂಮಿ ಪೂಜೆ, ಏನೆಲ್ಲ ಆಶೀರ್ವಚನ ನೀಡಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?