ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 6 JUNE 2024
RESULT NEWS : ಲೋಕಸಭೆ ಚುನಾವಣೆ ಬಳಿಕ ಜಿಲ್ಲೆಯಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆಯ ಫಲಿತಾಂಶ ಇವತ್ತು ಹೊರ ಬೀಳಲಿದೆ. ನಾಲ್ವರು ಘಟಾನುಘಟಿ ಅಭ್ಯರ್ಥಿಗಳ ಭವಿಷ್ಯ ಇವತ್ತು ನಿರ್ಧಾರವಾಗಲಿದೆ.
ಮೈಸೂರಿನ ಜೆಎಲ್‌ಬಿ ರಸ್ತೆಯ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ನೈಋತ್ಯ ಪದವೀಧರರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ನಡೆಯಲಿದೆ.
ನಾಲ್ವರು ಘಟಾನುಘಟಿಗಳ ಭವಿಷ್ಯ
ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಂಡಾಯದ ಬಿಸಿ ತಟ್ಟಿರುವುದರಿಂದ ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಬಿಜೆಪಿಯಿಂದ ಡಾ. ಧನಂಜಯ ಸರ್ಜಿ, ಕಾಂಗ್ರೆಸ್‌ನಿಂದ ಆಯನೂರು ಮಂಜುನಾಥ್ ಸ್ಪರ್ಧಿಸಿದ್ದಾರೆ. ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ರಘುಪತಿ ಭಟ್, ಕಾಂಗ್ರೆಸ್ ಪಕ್ಷಕ್ಕೆ ಬಂಡಾಯ ಅಭ್ಯರ್ಥಿಯಾಗಿ ಎಸ್.ಪಿ.ದಿನೇಶ್ ಕಣದಲ್ಲಿದ್ದಾರೆ.
ಶುರುವಾಗಿದೆ ಮತ ಎಣಿಕೆ
ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಪ್ರತಿ ಕ್ಷೇತ್ರಗಳಿಗೆ 14 ಟೇಬಲ್, ಓರ್ವ ಚುನಾವಣಾಧಿಕಾರಿ ಟೇಬಲ್ ಹಾಕಲಾಗಿದೆ. ಪ್ರತಿ ಟೇಬಲ್‌ಗೆ ಒಬ್ಬ ಮೇಲ್ವಿಚಾರಕರು, ಇಬ್ಬರು ಸಾಹಯಕರು ಇರಲಿದ್ದಾರೆ. ಪ್ರತಿ ಟೇಬಲ್‌ಗೆ ಅಭ್ಯರ್ಥಿಗಳ ಪರ ಏಜೆಂಟ್ ನೇಮಿಸಲಾಗಿದೆ.
ಇದನ್ನೂ ಓದಿ – ರಾಘವೇಂದ್ರ ಕೇಂದ್ರ ಸಚಿವರಾಗಲಿ ಅಂತಾ ಚಂದ್ರಗುತ್ತಿಯಲ್ಲಿ ಪೂಜೆ, ಯಾವ ಖಾತೆಗಾಗಿ ದೇವರಲ್ಲಿ ಪ್ರಾರ್ಥಿಸಿದರು?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422