| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಆಗಸ್ಟ್ 2021
ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮೊದಲ ಬಾರಿ ಜಿಲ್ಲೆಗೆ ಆಗಮಿಸಿದ ಮಾಜಿ ಶಾಸಕ ಮಧು ಬಂಗಾರಪ್ಪ ಅವರಿಗೆ ಶಿವಮೊಗ್ಗದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು. ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮೆರವಣಿಗೆ ಮಾಡಿದರು.
ಭದ್ರಾವತಿ ಬೈಪಾಸ್ನಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಾಗತ ಕೋರಲಾಯಿತು. ಮಧು ಬಂಗಾರಪ್ಪ ಅವರಿಗೆ ಸನ್ಮಾನ ಮಾಡಿ ಶುಭ ಹಾರೈಸಲಾಯಿತು.
ಇನ್ನು, ಮಲವಗೊಪ್ಪದ ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರು, ಮಧು ಬಂಗಾರಪ್ಪ ಅವರ ಬೆಂಬಲಿಗರು ಈ ವೇಳೆ ಇದ್ದರು
ಶಿವಮೊಗ್ಗದಲ್ಲಿ ಸ್ವಾಗತ, ಮೆರವಣಿಗೆ
ಎಂ.ಆರ್.ಎಸ್ ಸರ್ಕಲ್ ನಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮಧು ಬಂಗಾರಪ್ಪ ಅವರಿಗೆ ಅದ್ಧೂರಿ ಸ್ವಾಗತ ಕೋರಿದರು. ನೂರಾರು ಕಾರ್ಯಕರ್ತರ ಘೋಷಣೆಯೊಂದಿಗೆ ಮಧು ಬಂಗಾರಪ್ಪ ಅವರಿಗೆ ಮೆರವಣಿಗೆ ಮಾಡಲಾಯಿತು.
ಎಂ.ಆರ್.ಎಸ್ ಸರ್ಕಲ್ ನಿಂದ ಬಿ.ಹೆಚ್.ರಸ್ತೆ ಮಾರ್ಗವಾಗಿ ಗೋಪಿ ಸರ್ಕಲ್ ವರೆಗೆ ಬೈಕ್ ರಾಲಿ ಮೂಲಕ ಮಧು ಬಂಗಾರಪ್ಪ ಅವರನ್ನು ಕರೆತರಲಾಯಿತು. ಗೋಪಿ ಸರ್ಕಲ್ ನಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.





(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()