ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS | 9 APRIL 2024
SHIMOGA : ಲೋಕಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷ 25 ಗ್ಯಾರಂಟಿ ಘೋಷಣೆ ಮಾಡಿದೆ. ಈ ಗ್ಯಾರಂಟಿಗಳ ಕರಪತ್ರಗಳನ್ನು ಶಿವಮೊಗ್ಗದಲ್ಲಿ ಮನೆ ಮನೆಗೆ ತಲುಪಿಸಲಾಗುವುದು ಎಂದು ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ (ಸೂಡಾ) ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್, ಈಗಾಗಲೇ ರಾಜ್ಯ ಸರ್ಕಾರದ ಗ್ಯಾರಂಟಿಗಳು ಈಡೇರಿವೆ. ಜಿಲ್ಲೆಯಲ್ಲಿ 4.60 ಲಕ್ಷ ಮನೆಗಳಿಗೆ 2 ಸರ್ಕಾರದ ವಿವಿಧ ಯೋಜನೆಗಳು ತಲುಪಿವೆ. ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಮಾಡಿರುವ ಗ್ಯಾರಂಟಿ ಪತ್ರಗಳನ್ನು ಜನರಿಗೆ ತಲುಪಿಸಲಾಗುವುದು ಎಂದರು.
ಎಐಸಿಸಿ ಘೋಷಿಸಿರುವ ಗ್ಯಾರಂಟಿಗಳು ಮತ್ತು ರಾಜ್ಯ ಸರ್ಕಾರದ ಗ್ಯಾರಂಟಿಯಿಂದ ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ. ಶಿವಮೊಗ್ಗದಲ್ಲಿಯು ನಮ್ಮ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಗೆಲುವು ನಿಶ್ಚಿತ. ದೇಶದಲ್ಲಿ ಮೋದಿ ಅಲೆ ಇಲ್ಲ. ಬಿಜೆಪಿ ಹೇಳುವುದೆಲ್ಲವೂ ಸುಳ್ಳು. ಜನರ – ಮೇಲೆ ಲಕ್ಷಾಂತರ ರೂ. ಸಾಲ ಹೊರಿಸಲಾಗಿದೆ ಎಂದು ಆರೋಪಿಸಿದರು.
ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್, ಪ್ರಮುಖರಾದ ಚಂದ್ರಭೂಪಾಲ್, ಕಲೀಂ ಪಾಶಾ, ರಮೇಶ್ ಶೆಟ್ಟಿ, ಎಸ್.ಟಿ. ಚಂದ್ರಶೇಖರ್, ಗಿರೀಶ್ ರಾವ್, ಇಕ್ಕೇರಿ ರಮೇಶ್ ಸೇರಿದ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಇದನ್ನೂ ಓದಿ – ಶಿವಮೊಗ್ಗ ನಿಲ್ದಾಣದಲ್ಲಿ ಬಸ್ಸಿನಲ್ಲಿ 15 ನಿಮಿಷ ನಿದ್ರೆ, ಎದ್ದಾಗ ಸಾಫ್ಟ್‌ವೇರ್ ಇಂಜಿನಿಯರ್‌ಗೆ ಶಾಕ್, ಆಗಿದ್ದೇನು?


