‘ಕರ್ನಾಟಕಕ್ಕೆ ಮೋದಿ ಚೊಂಬು, ಲೇವಡಿ ಮಾಡಿದ್ದ ಮೋದಿಯಿಂದಲೇ ಈಗ ಗ್ಯಾರಂಟಿ ಪದ ಬಳಕೆ’

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS
SHIVAMOGGA LIVE NEWS | 20 APRIL 2024
➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ELECTION NEWS : ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಇದಕ್ಕಾಗಿ ಗ್ಯಾರಂಟಿ ಹಬ್ಬ ಆಯೋಜಿಸಲಾಗಿದೆ. ಎಐಸಿಸಿ ನೀಡಿರುವ ಭರವಸೆಗಳ ಗ್ಯಾರಂಟಿ ಕಾರ್ಡ್ ಅನ್ನು ಮನೆ ಮನೆಗೆ ತಲುಪಿಸಬೇಕಿದೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವರಿ ರಣದೀಪ್‌ ಸಿಂಗ್‌ ಸುರ್ಜೇವಾಲ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ರಾಜ್ಯದಲ್ಲಿ ಗ್ಯಾರಂಟಿ ಕಾರ್ಡ್ ಹಂಚಿದಾಗ ಪ್ರಧಾನಿ ನರೇಂದ್ರ ಮೋದಿ ಮತ್ತು ಯಡಿಯೂರಪ್ಪ ಅವರು ಲೇವಡಿ ಮಾಡಿದ್ದರು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎಂದಿದ್ದರು. ನಾವು ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಯೋಜನೆಗಳ್ನನು ಜಾರಿ ಮಾಡಿದ್ದೇವೆ. ಈಗ ಮೋದಿಯೇ ನಮ್ಮ ಗ್ಯಾರಂಟಿ ಶಬ್ದ ಕದ್ದಿದ್ದಾರೆ ಎಂದು ಲೇವಡಿ ಮಾಡಿದ್ದಾರೆ ಎಂದರು.

ಕರ್ನಾಟಕಕ್ಕೆ ಮೋದಿ ಚೊಂಬು ನೀಡಿದ್ದಾರೆ

ಕರ್ನಾಟಕದಿಂದ 100 ರೂ. ಜಿಎಸ್‌ಟಿ ಸಂಗ್ರಹಿಸುವ ಕೇಂದ್ರ ಸರ್ಕಾರ ಕೇವಲ 13 ರೂ. ರಾಜ್ಯಕ್ಕೆ  ನೀಡುತ್ತಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬಂದರೆ ಜಿಎಸ್‌ಟಿ ವ್ಯವಸ್ಥೆಯಲ್ಲಿ ಸುಧಾರಣೆ ತರುತ್ತೇವೆ. ಮೋದಿ ಸರ್ಕಾರ ರಾಜ್ಯಕ್ಕೆ ಚೊಂಬು ನೀಡಿದೆ ಎಂದು ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಚೊಂಬು ಜಾಹೀರಾತಿ ಪ್ರದರ್ಶಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಶಾಸಕರಾದ ಬಿ.ಕೆ ಸಂಗಮೇಶ್, ಬೇಳೂರು ಗೋಪಾಲಕೃಷ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ಸೂಡಾ ಅಧ್ಯಕ್ಷ ಸುಂದರೇಶ್, ಪ್ರಮುಖರಾದ ಮರಿಯಪ್ಪ, ಡಾ. ಶ್ರೀನಿವಾಸ್ ಕರಿಯಣ್ಣ, ಪಲ್ಲವಿ, ಎನ್. ರಮೇಶ್, ಎಂಶ್ರೀಕಾಂತ್, ಯೋಗೇಶ್, ರವಿಕುಮಾರ್, ವಿಜಯ್‌ಕುಮಾರ್ ಮತ್ತಿತರರಿದ್ದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಳೆ, ಸಿಡಿಲಿಗೆ ವ್ಯಕ್ತಿ ಬಲಿ, ವಿವಿಧೆಡೆ ಮನೆ, ಬೆಳೆ ಹಾನಿ, ಹಾರಿ ಹೋದ ಛಾವಣಿ, ಎಲ್ಲೆಲ್ಲಿ ಏನೇನಾಗಿದೆ?

Leave a Comment