ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | HOME MINISTER | 12 ಏಪ್ರಿಲ್ 2022
ಬಿಜೆಪಿ ಕಾರ್ಯಕರ್ತ ಮತ್ತು ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಕೆ.ಎಸ್.ಈಶ್ವರಪ್ಪ ಅವರ ಮೇಲಿನ ಆರೋಪ ಸಂಬಂಧವು ಹೇಳಿಕೆ ನೀಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಗೃಹ ಸಚಿವರು ಹೇಳಿದ್ದೇನು?
‘ಉಡುಪಿ ಜಿಲ್ಲಾ ರಕ್ಷಣಾಧಿಕಾರಿ ಅವರ ಜೊತೆಗೆ ಈಗಷ್ಟೆ ಮಾತನಾಡಿದ್ದೇನೆ. ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಆಗಮಿಸುತ್ತಿದ್ದಾರೆ. ಅವರು ಬಂದ ಬಳಿಕ ಕೊಠಡಿಯ ಬಾಗಿಲು ತೆಗೆದು ಪರಿಶೀಲನೆ ನಡೆಸಲಾಗುತ್ತದೆ. ಆನಂತರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ’
‘ಯಾರೋ ಹೇಳಿದರು ಅಂತಾ ಯಾರನ್ನೋ ಬಂಧಿಸುವುದು. ಇನ್ಯಾರನ್ನೊ ಬಿಡಲು ಸಾಧ್ಯವಾಗುವುದಿಲ್ಲ. ಕಾಂಗ್ರೆಸ್’ನವರ ಬೇಡಿಕೆಗೆ ಅನುಗುಣವಾಗಿ ಬಂಧನ ಮಾಡಲು ಸಾಧ್ಯವಿಲ್ಲ. ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಪೊಲೀಸರು ಕಾನೂನು ಕ್ರಮ ಕೈಗೊಳ್ಳುತ್ತಾರೆ.’
‘ಆತ ಸಾಮಾಜಿಕ ಜಾಲತಾಣದಲ್ಲಿ ಒಂದಷ್ಟು ಬರೆದಿರುವ ಬಗ್ಗೆ ಗೊತ್ತಾಗಿದೆ. ತಮ್ಮೊಂದಿಗೆ ಇಬ್ಬರನ್ನು ಕರೆದೊಯ್ದಿದ್ದೇನೆ. ಅವರಿಗೆ ಈ ವಿಚಾರದಲ್ಲಿ ಏನೂ ಸಂಬಂಧವಿಲ್ಲ ಎಂದೆಲ್ಲ ಬರೆದಿದ್ದಾರೆ. ಆ ದೃಷ್ಟಿಯಲ್ಲೂ ತನಿಖೆ ನಡೆಯಲಿದೆ.’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಮನೆಗೆ ಮುತ್ತಿಗೆ ಯತ್ನ
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200
HOME MINISTER