ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 01 ಏಪ್ರಿಲ್ 2019
ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ, ಮೈತ್ರಿ ಪಕ್ಷಗಳ ಕ್ಯಾಂಡಿಡೇಟ್ ಮಧು ಬಂಗಾರಪ್ಪ ನಡುವಿನ ಟೈಟ್ ಫೈಟ್’ನ ನಡುವೆ, ಪಕ್ಷೇತರ ಅಭ್ಯರ್ಥಿಗಳ ಅಬ್ಬರ ಹೆಚ್ಚಾಗಿದೆ. ಈವರೆಗೂ ಐವರು ಅಭ್ಯರ್ಥಿಗಳು ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲು, ನಾಮಪತ್ರ ಸಲ್ಲಿಸಿದ್ದಾರೆ.
ಯಾರೆಲ್ಲ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಶಶಿಕುಮಾರ್ ಗೌಡ | ಭದ್ರಾವತಿಯ ಶಶಿಕುಮಾರ್ ಎಸ್.ಗೌಡ, ಲೋಕಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಬಿ.ವೈ.ರಾಘವೇಂದ್ರ ಮತ್ತು ಮಧು ಬಂಗಾರಪ್ಪ ವಿರುದ್ಧ ಸ್ಪರ್ಧಿಸಿ 17 ಸಾವಿರ ಮತಗಳನ್ನು ಪಡೆದಿದ್ದರು. ಈ ಬಾರಿಯೂ ಪಕ್ಷೇತರ ಅಭ್ಯರ್ಥಿಯಾಗಿ ಶಶಿಕುಮಾರ್ ಗೌಡ ನಾಮಪತ್ರ ಸಲ್ಲಿಸಿದ್ದಾರೆ.
ಗುಡ್ಡಪ್ಪ | ಬಹುಜನ ಸಮಾಜ ಪಕ್ಷದಿಂದ, ಗುಡ್ಡಪ್ಪ ನಾಮಪತ್ರ ಸಲ್ಲಿಸಿದ್ದಾರೆ. ಮಾರ್ಚ್ 30ರಂದು ಗುಡ್ಡಪ್ಪ ನಾಮಪತ್ರ ಸಲ್ಲಿಸಿದ್ದಾರೆ.
ಶೇಖರ್ ನಾಯ್ಕ | ಶಿವಮೊಗ್ಗದ ಅಶೋಕ ನಗರದ ಶೇಖರ್ ನಾಯ್ಕ ಅವರು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಉಮೇಶಪ್ಪ | ಶಿಕಾರಿಪುರ ತಾಲೂಕಿನ ಬಸವನಂದಿಹಳ್ಳಿ ಗ್ರಾಮದ ಉಮೇಶಪ್ಪ ಅವರು, ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ಕೃಷ್ಣ | ಮತ್ತೊಂದೆಡೆ ಬಳ್ಳಾರಿ ಜಿಲ್ಲೆಯ ಶೆರೇಶ್ವರ ಗುಡಿ ಬೀದಿಯ ಕೃಷ್ಣ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದಾರೆ.
ಏಪ್ರಿಲ್ 4ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಹಾಗಾಗಿ ನಾಮಪತ್ರ ಸಲ್ಲಿಸುವ ಸ್ವತಂತ್ರ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಏಪ್ರಿಲ್ 8ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





