SHIVAMOGGA LIVE NEWS | 30 MAY 2024
SHIMOGA : ವಿಧಾನ ಪರಿಷತ್ ಚುನಾವಣೆಯನ್ನು ಕಾಂಗ್ರೆಸ್ ಹಣ ಬಲದಲ್ಲಿ (Money Power) ಗೆಲ್ಲಬಹುದು ಎಂಬ ಭ್ರಮೆಯಲ್ಲಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್ ಆರೋಪಿಸಿದರು.
![]() |
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೈಋತ್ಯ ಶಿಕ್ಷಕರ ಕ್ಷೇತ್ರದ ಭೋಜೇಗೌಡ ಹಾಗೂ ಪದವೀಧರ ಕ್ಷೇತ್ರದ ಡಾ.ಧನಂಜಯ ಸರ್ಜಿ ಪರ ಕ್ಷೇತ್ರ ವ್ಯಾಪ್ತಿಯಲ್ಲಿ ಉತ್ತಮ ಪ್ರತಿಕ್ರಿಯೆ ಇದೆ. ಆದರೆ, ಕಾಂಗ್ರೆಸ್ ಹಣ ಹಂಚುವ ಮೂಲಕ ಮತ ಸೆಳೆಯಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.
ಡಾ.ಧನಂಜಯ ಸರ್ಜಿ ವೈದ್ಯಕೀಯ ಕ್ಷೇತ್ರದ ಜತೆಗೆ ಸಮಾಜಸೇವೆಯಲ್ಲೂ ಗುರುತಿಸಿಕೊಂಡಿದ್ದಾರೆ. ಭೋಜೇಗೌಡ ಅವರು ಶಿಕ್ಷಕರ ಪರ ಕೆಲಸ ಮಾಡಿದ್ದಾರೆ. ಇಬ್ಬರಿಗೂ ಮೊದಲ ಪ್ರಾಶಸ್ತ್ರದ ಮತ ನೀಡಿ ಎಂದರು.
ಇದನ್ನೂ ಓದಿ – ಸ್ಮಾರ್ಟ್ ಹೆಲ್ಮೆಟ್ ಸಿದ್ಧಪಡಿಸಿದ ಶಿವಮೊಗ್ಗದ ವಿದ್ಯಾರ್ಥಿಗಳು, ಹೇಗೆ ಕೆಲಸ ಮಾಡುತ್ತೆ? ಪ್ರಯೋಜನವೇನು?
ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ಮಾತನಾಡಿ, ರಾಜ್ಯ ಸರಕಾರ ಎಲ್ಲ ಕ್ಷೇತ್ರಗಳಲ್ಲೂ ವಿಫಲವಾಗಿದೆ. ಅತಿವೃಷ್ಟಿಗೆ ಯಾವ ರೀತಿ ಸಿದ್ಧವಾಗುತ್ತಿದೆ ಎಂಬುದೆ ತಿಳಿಯುತ್ತಿಲ್ಲ. ಸಾಂಕ್ರಾಮಿಕ ರೋಗಗಳು ಹರಡದಂತೆ ವ್ಯವಸ್ಥೆ ಮಾಡಿಕೊಳ್ಳುವ ಕಡೆ ಸರಕಾರ ಗಮನ ಹರಿಸಬೇಕು ಎಂದರು.
ದೀಪಕ್ ಸಿಂಗ್, ಕೆ.ಎನ್.ರಾಮಕೃಷ್ಣ, ದಾದಾಪೀರ್, ನರಸಿಂಹ, ಅಲ್ತಾಫ್, ಸಿದ್ದಪ್ಪ, ವಿನಯ್, ಗೋಪಿ ಇದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200