ಶಿವಮೊಗ್ಗ ಲೈವ್.ಕಾಂ | 25 ಫೆಬ್ರವರಿ 2019
ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಹೆಸರನ್ನು ಜೆಡಿಎಸ್ ಪಕ್ಷ ಫೈನಲ್ ಮಾಡಿದೆ. ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರಿಗೆ ಟೈಟ್ ಫೈಟ್ ನೀಡಿದ್ದ, ಮಧು ಬಂಗಾರಪ್ಪ ಅವರ ಹೆಸರನ್ನೇ ಅಂತಿಮಗೊಳಿಸಲಾಗಿದೆ.
![]() |
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರೇ ಮಧು ಬಂಗಾರಪ್ಪ ಅವರ ಹೆಸರನ್ನು ಫೈನಲ್ ಮಾಡಿ, ಘೋಷಣೆಯನ್ನೂ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಧು ಬಂಗಾರಪ್ಪ ಅವರ ಮನೆಗೆ ಭೇಟಿ ನೀಡಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಈ ಘೋಷಣೆ ಮಾಡಿದ್ದಾರೆ ಎನ್ನಲಾಗಿದೆ.
ಜಿಲ್ಲಾ ಕಾಂಗ್ರೆಸ್’ನಲ್ಲಿ ಎಲ್ಲರೂ ಸೈಲೆಂಟ್
ಇನ್ನು, ರಾಜ್ಯದ್ಯಂತ ಮೈತ್ರಿ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ನಿರ್ಧರಿಸಿದೆ. ಈಗಾಗಲೇ ಸೀಟು ಹಂಚಿಕೆ ವಿಚಾರ ರಾಜ್ಯಮಟ್ಟದಲ್ಲಿ ಗೊಂದಲದ ಗೂಡಾಗಿದೆ. ಇಷ್ಟರ ನಡುವೆ, ಶಿವಮೊಗ್ಗದ ಜೆಡಿಎಸ್ ಅಭ್ಯರ್ಥಿಯನ್ನು ಷೋಷಣೆ ಮಾಡಲಾಗಿದೆ. ಇದು ಕಾಂಗ್ರೆಸ್ ನಾಯಕರಿಗೆ ಇರಿಸು ಮುರಿಸು ತಂದಿದೆ. ಆದರೆ ಈ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಕಾಂಗ್ರೆಸ್ ಮುಖಂಡರಾರು ಬಹಿರಂಗವಾಗಿ ಹೇಳಿಕೆ ನೀಡಬಾರದು ಅಂತಾ ಮೌಖಿಕವಾಗಿ ಆದೇಶ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಪ್ರಮುಖ ಮುಖಂಡರ ಸಭೆ ನಡೆಸಿದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಅಭ್ಯರ್ಥಿ ಆಯ್ಕೆ ವಿಚಾರವಾಗಿ ಗೊಂದಲ ಮೂಡಿಸುವ ಹೇಳಿಕೆ ನೀಡಬಾರದು ಎಂದು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿಗೂ ಮೊದಲೇ ಅಭ್ಯರ್ಥಿ ಘೋಷಣೆ
ಉಪ ಚುನಾವಣೆ ಸಂದರ್ಭ, ಬಿಜೆಪಿ ಮೊದಲಿಗೇ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿತ್ತು. ಆದರೆ ಈ ಬಾರಿ ಇನ್ನೂ ಅಭ್ಯರ್ಥಿ ಹೆಸರು ಪ್ರಕಟಿಸಿಲ್ಲ. ಬಿ.ವೈ.ರಾಘವೇಂದ್ರ ಅವರಿಗೆ ಟಿಕೆಟ್ ಬಹುತೇಕ ಕನ್’ಫರ್ಮ್ ಆಗಿದ್ದರೂ, ಈವರೆಗೂ ರಾಜ್ಯದ ಯಾವುದೇ ಕ್ಷೇತ್ರಕ್ಕೂ ಅಭ್ಯರ್ಥಿ ಹೆಸರನ್ನು ಪ್ರಕಟಿಸಲಾಗಿಲ್ಲ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200