ಶಿವಮೊಗ್ಗ ಲೈವ್
ಶಿವಮೊಗ್ಗ: ನಗರದಲ್ಲಿಯುವ ‘ನಾವು ಹಳ್ಳಿಯವರು, ಏನಿವಾಗ?ʼ ಫ್ಲೆಕ್ಸ್‌ಗಳು ಪ್ರತ್ಯಕ್ಷವಾಗಿವೆ. ಜೆಡಿಎಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗವು ನಗರದ ವಿವಿಧೆಡೆ ಈ ಫ್ಲೆಕ್ಸ್‌ಗಳನ್ನು ಅಳವಡಿಸಿದೆ. (ಈ ಸುದ್ದಿಯನ್ನು ಇನ್ನು 31 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಶಿವಮೊಗ್ಗ ನಗರದಲ್ಲಿ ಅಳವಡಿಸಿರುವ ಫ್ಲೆಕ್ಸ್‌ನಲ್ಲಿ ಹಳ್ಳಿಯ ಚಿತ್ರ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಭಾವಚಿತ್ರಗಳಿವೆ. ‘ಗೃಹಸಚಿವರೆ.. ನಾವು ಹಳ್ಳಿಯವರು ಏನಿವಾಗ.. ಎಂಬ ಪ್ರಶ್ನೆಯನ್ನು ಮುದ್ರಿಸಲಾಗಿದೆ.

ಇತ್ತೀಚೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಂದರ್ಭ ಹಳ್ಳಿ ಗುಗ್ಗುವಿನಂತೆ ಮಾತನಾಡಬಾರದು ಎಂದು ಟೀಕಿಸಿದ್ದರು. ಇದರ ಬೆನ್ನಿಗೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು, ಕಾರ್ಯಕರ್ತರು, ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ರಾಜ್ಯದ ವಿವಿಧೆಡೆ ನಾವು ಹಳ್ಳಿಯವರು ಎಂಬ ಪೋಸ್ಟರ್, ಫ್ಲೆಕ್ಸ್‌ಗಳನ್ನು ಅಳವಡಿಸಲಾಗುತ್ತಿದೆ.