ಶಿವಮೊಗ್ಗ : ರಾಜ್ಯ ಸರ್ಕಾರ ವೈಫಲ್ಯ ಖಂಡಿಸಿ ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ಇವತ್ತು ಪ್ರತಿಭಟನೆ (Protest) ನಡೆಸಲಾಯಿತು. ಜೆಡಿಎಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಜೆಡಿಎಸ್ ಕಾರ್ಯಕರ್ತರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಮೂರು ತಿಂಗಳಿಂದ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡಿಲ್ಲ, ಅನ್ನ ಭಾಗ್ಯ ಯೋಜನೆ ಅಕ್ಕಿಯೂ ಕೊಟ್ಟಿಲ್ಲ, ಹಣವನ್ನೂ ನೀಡಿಲ್ಲ. ಗುತ್ತಿಗೆದಾರರ 32 ಸಾವಿರ ಕೋಟಿ ರೂ. ಬಿಲ್ ಬಾಕಿ ಸೇರಿದಂತೆ ರಾಜ್ಯ ಸರ್ಕಾರ ನಡೆ ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಯಾರೆಲ್ಲ ಏನೆಲ್ಲ ಹೇಳಿದರು?
ಸರ್ಕಾರದ ಬಳಿ ಹಣವಿಲ್ಲ. ಅಭಿವೃದ್ದಿ ಕಾರ್ಯಗಳು ನಡೆಯುತ್ತಿಲ್ಲ. ಎಲ್ಲಾ ಭಾಗ್ಯಗಳು ಜನರಿಂದ ದೂರಾಗಿದ್ದು, ಅತ್ಮಹತ್ಯೆ ಭಾಗ್ಯ ನೀಡಿದೆ. ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಇ – ಸ್ವತ್ತು ಸರಳೀಕರಣಗೊಳಿಸಿಲ್ಲ. ದುರಾಡಳಿತದಿಂದ ಜನರು ತತ್ತರಿಸಿದ್ದಾರೆ.
– ಕೆ.ಬಿ.ಪ್ರಸನ್ನಕುಮಾರ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ

ನೆಟ್ಟು, ಬೋಲ್ಟು ಕುರಿತು ಉಪ ಮುಖ್ಯಮಂತ್ರಿ ಹೇಳಿಕೆ ನೀಡುತ್ತಿದ್ದಾರೆ. ಆದರೆ ಸರ್ಕಾರದ ನೆಟ್ಟು, ಬೋಲ್ಟುಗಳನ್ನೇ ಟೈಟ್ ಮಾಡಬೇಕಾಗಿದೆ. ಸರ್ಕಾರದಲ್ಲಿ 2.76 ಲಕ್ಷ ಹುದ್ದೆಗಳು ಖಾಲಿ ಇದೆ. ಇವುಗಳನ್ನು ಭರ್ತಿ ಮಾಡಿಕೊಳ್ಳದೆ ಸರ್ಕಾರ ವಿಫಲವಾಗಿದೆ. ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡಿಲ್ಲ. ಇದೇ ರೀತಿ ಹಲವು ವೈಫಲ್ಯಗಳಿವೆ.
– ಕಡಿದಾಳ್ ಗೋಪಾಲ್, ಜೆಡಿಎಸ್ ಜಿಲ್ಲಾಧ್ಯಕ್ಷ
ಪ್ರತಿಭಟನೆಯಲ್ಲಿ ಪ್ರಮುಖರಾದ ದೀಪಕ್ ಸಿಂಗ್, ತ್ಯಾಗರಾಜ್, ಮಧು ಕುಮಾರ್, ಗಂಧದಮನೆ ನರಸಿಂಹ, ದಾದಾಪೀರ್, ಅಬ್ದುಲ್ ವಾಜಿದ್, ಶ್ಯಾಮ್, ಮಾಧವಮೂರ್ತಿ, ನಿಖಿಲ್, ಬಾಬು, ಸಿದ್ದೇಶ್, ಚಟ್ನಳ್ಳಿ ಸುರೇಶ್ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ » ಸಾಗರ ನಗರಸಭೆಯಲ್ಲಿ ಗದ್ದಲ, ಶಿವಮೊಗ್ಗದಲ್ಲಿ ಡಿಸಿಗೆ ದೂರು ಕೊಟ್ಟ ಕಾಂಗ್ರೆಸ್ ನಿಯೋಗ, ಕಾರಣವೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200