‘ಹೊರಗೆ ರಾಘವೇಂದ್ರ ಅವರನ್ನು ಗೆಲ್ಲಿಸಬೇಕು ಅನ್ನುತ್ತಾರೆ, ಮನಸಲ್ಲಿ ಸೋಲಿಸಬೇಕು ಅಂದುಕೊಳ್ಳುತ್ತಿದ್ದಾರೆ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 20 ಏಪ್ರಿಲ್ 2019

ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಸೋಲಿಸಬೇಕು ಅಂತಾ ಈಶ್ವರಪ್ಪ ಅವರು ಮನಸಿನಲ್ಲೇ ಅಂದುಕೊಳ್ಳುತ್ತಿದ್ದಾರೆ. ಅದರೆ ಹೊರಗೆ ಮಾತ್ರ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಅನ್ನುತ್ತಿದ್ದಾರೆ ಅಂತಾ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.

ಶಿವಮೊಗ್ಗದ ಉಂಬಳೆಬೈಲು ಗ್ರಾಮದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್, ಯಡಿಯೂರಪ್ಪ ಮತ್ತು ಬಿ.ವೈ.ರಾಘವೇಂದ್ರ ಅವರು ಮೋದಿಗೆ ಮತ ನೀಡಿ ಎಂದು ಕೇಳುತ್ತಿದ್ದಾರೆ. ಹಾಗಿದ್ದರೆ, ಇವರು ಸಂಸದರಾಗಿದ್ದಾಗ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಿಲ್ಲವೇ ಎಂದು ಪ್ರಶ್ನಿಸಿದರು.

ಶುಭಗಳಿಗೆಯಲ್ಲಿ ಬರಲು ಆಗಲಿಲ್ಲ

ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಸುವ ಸಂದರ್ಭ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಮತ್ತು ಎಸ್.ಎಂ.ಕೃಷ್ಣ ಅವರು ಶಿವಮೊಗ್ಗಕ್ಕೆ ಬರಲು ಸಾಧ್ಯವಾಗಲಿಲ್ಲ. ಶುಭಗಳಿಗೆ, ಶುಭ ಮುಹೂರ್ತಕ್ಕೆ ಅವರು ಬರಲು ಆಗಲಿಲ್ಲ. ದೇವರು ಮಧು ಬಂಗಾರಪ್ಪ ಅವರಿಗೆ ಆಶೀರ್ವಾದ ಮಾಡಿದ್ದಾರೆ ಅಂತಾ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ, ಪಕ್ಷದ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸೇರಿದಂತೆ ಹಲವರು ಸಭೆಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 20, 2019

Leave a Comment