ಕಾಗೋಡು ತಿಮ್ಮಪ್ಪ ಕಡೆಗಣನೆ, ಕಾಂಗ್ರೆಸ್ ಮುಖಂಡರ ಆಕ್ರೋಶ

Published On : ನವೆಂಬರ್ 3, 2022

Published By : ನಿತಿನ್‌ ಆರ್‌.ಕೈದೊಟ್ಲು 

SHIVAMOGGA LIVE NEWS | 3 NOVEMBER 2022

SAGARA | ಸಾಗರದ ಒಳಾಂಗಣ ಕ್ರೀಡಾಂಗಣದ (indoor stadium) ಉದ್ಘಾಟನೆ ಸಂದರ್ಭ ಕ್ರೀಡಾಂಗಣಕ್ಕೆ ಅನುದಾನ ತಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ಸ್ಮರಿಸದೆ ಇರುವುದು ನೋವಿನ ಸಂಗತಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ರಾಜನಂದಿನಿ ಕಾಗೋಡು ಬೇಸರ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ರಾಜನಂದಿನಿ ಕಾಗೋಡು ಅವರು, ಕಾಗೋಡು ತಿಮ್ಮಪ್ಪ ಅವರು 2017ರಲ್ಲಿ ಒಳಾಂಗಣ ಕ್ರೀಡಾಂಗಣ (indoor stadium) ಕಾಮಗಾರಿ ಮಾಂಜೂರು ಮಾಡಿಸಿ, 3.12 ಕೋಟಿ ರೂ., ಅನುದಾನ ಮೀಸಲಿರಿಸಿದ್ದರು. ಮೊದಲ ಹಂತದಲ್ಲಿ 15 ಲಕ್ಷ ರೂ. ಹಣ ಮಂಜೂರು ಮಾಡಿಸಿದ್ದರು ಎಂದು ತಿಳಿಸಿದರು.

(indoor stadium)

ಇಷ್ಟು ದೊಡ್ಡ ಕ್ರೀಡಾಂಗಣಕ್ಕೆ ಅಡಿಪಾಯ ಹಾಕಿದ ಕಾಗೋಡು ತಿಮ್ಮಪ್ಪ ಅವರನ್ನು ಅದರ ಉದ್ಘಾಟನೆಗೆ ಆಹ್ವಾನಿಸಲಿಲ್ಲ. ಅವರ ಕೊಡುಗೆಯನ್ನು ಸ್ಮರಿಸಲು ಇಲ್ಲ. ವಿಧಾನ ಸಭೆ ಅಧ್ಯಕ್ಷರು, ಸಚಿವರಾಗಿದ್ದ ಸಂದರ್ಭ ಕಾಗೋಡು ತಿಮ್ಮಪ್ಪ ಅವರು ಅನೇಕ ಕಾಮಗಾರಿ ಮಂಜೂರು ಮಾಡಿಸಿದ್ದಾರೆ ಎಂದರು.

ಕ್ಲಿಕ್ ಮಾಡಿ ಇದನ್ನೂ ಓದಿ ‘ಕಾಗೋಡು ತಿಮ್ಮಪ್ಪ ಸ್ಪರ್ಧೆಗೆ ಅವಕಾಶ ಕೊಡಬೇಕು, ಅವಿರೋಧ ಆಯ್ಕೆಗೆ ಸರ್ವ ಪಕ್ಷಗಳು ಮುಂದಾಗಬೇಕು’

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್, ಐ.ಎಸ್.ಸುರೇಶ್ ಬಾಬು, ಮಧು ಮಾಲತಿ, ಮಹಾಬಲ ಕೌತಿ, ವೆಂಕಟೇಶ್ ಮೆಳವರಿಗೆ, ಡಿ. ದಿನೇಶ್ ಸುದ್ದಿಗೋಷ್ಠಿಯಲ್ಲಿದ್ದರು.

Shimoga Nanjappa HOspital

ADVERTISEMENT 

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಮ್ಮ ಸೋಶಿಯಲ್ ಮೀಡಿಯಾ ಗ್ರೂಪ್ ಸೇರಿ

JNN College of Engineering Admissions started

© ಶಿವಮೊಗ್ಗ ಲೈವ್‌ : ನವೆಂಬರ್ 3, 2022

Leave a Comment