ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 28 MARCH 2023
ELECTION : ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ (Election Date) ಘೋಷಣೆಯಾಗಿದೆ. ಮೇ 10 ರಂದು ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಸಲಾಗುತ್ತದೆ. ಎಣಿಕೆ ಮೇ 13 ರಂದು ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.
ಈ ಚುನಾವಣೆಯಲ್ಲಿ 5.21 ಕೋಟಿ ಮತದಾರರಿದ್ದಾರೆ. 2.62 ಕೋಟಿ ಪುರುಷ ಮತದಾರರು, 2.59 ಕೋಟಿ ಮಹಿಳಾ ಮತದಾರರಿದ್ದಾರೆ. 4,699 ತೃತೀಯ ಲಿಂಗಿ ಮತದಾರರು ಇದ್ದಾರೆ.
ಒಟ್ಟು 58,282 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ನಗರ ಪ್ರದೇಶದಲ್ಲಿ 24,043 ಮತಗಟ್ಟೆಗಳು, ಗ್ರಾಮೀಣ ಭಾಗದಲ್ಲಿ 34,219 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ. 1,320 ಮತಗಟ್ಟೆಗಳನ್ನು ಮಹಿಳೆಯರೆ ಸಂಪೂರ್ಣವಾಗಿ ನಿರ್ವಹಿಸಲಿದ್ದಾರೆ.
ಮೇ 24ಕ್ಕೆ 15 ವಿಧಾನಸಭೆ ಅವಧಿ ಪೂರ್ಣಗೊಳ್ಳಲಿದೆ.
ಇದನ್ನೂ ಓದಿ – ತಾಂಡಾಗಳ ಮುಂದೆ ಎಚ್ಚರಿಕೆಯ ಫ್ಲೆಕ್ಸ್ ಪ್ರತ್ಯಕ್ಷ, ಏನಿದೆ? ಎಚ್ಚರಿಕೆ ಯಾರಿಗೆ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422