ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 3 SEPTEMBER 2024 : ಡಾ. ಕಸ್ತೂರಿ ರಂಗನ್ ವರದಿಯನ್ನು (Report) ಯಥಾವತ್ತಾಗಿ ಜಾರಿಗೊಳಿಸಲು ಸಾಧ್ಯವಿಲ್ಲ. ಪರಿಷ್ಕರಣೆಯಾಗದೆ ವರದಿ ಜಾರಿಗೊಳಿಸಿದರೆ ಅರಣ್ಯ ಪ್ರದೇಶದ ನಿವಾಸಿಗಳು ಊರು ಬಿಡುವಂತಹ ಸ್ಥಿತಿ ಎದುರಾಗಲಿದೆ ಎಂದು ಸಚಿವ ಮಧು ಬಂಗಾರಪ್ಪ ಆತಂಕ ವ್ಯಕ್ತಪಡಿಸಿದರು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಕಸ್ತೂರಿ ರಂಗನ್ ವರದಿ ಪರಿಷ್ಕರಣೆ ಕುರಿತು ತಿಳಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಮಿನಿಸ್ಟರ್ ಹೇಳಿದ 4 ಪಾಯಿಂಟ್
ರಾಜ್ಯದಲ್ಲಿ ಗುಡ್ಡ ಕುಸಿತ ಪ್ರಕರಣಗಳಿಂದ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ ತರಾತುರಿಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೊಳಿಸಲು ಮುಂದಾಗಿದೆ. ಇದು ಪರಿಷ್ಕರಣೆಗೆ ಒಳಪಡದೆ ಜಾರಿಗೊಂಡರೆ ಅರಣ್ಯ ಪ್ರದೇಶ ನಿವಾಸಿಗಳು ಊರು ಬಿಡುವ ಸ್ಥಿತಿ ಎದುರಾಗಲಿದೆ.
ಕಸ್ತೂರಿ ರಂಗನ್ ವರದಿ ಜಾರಿಯಿಂದ ಅರಣ್ಯ ಪ್ರದೇಶಗಳ ಜನವಸತಿ ಪ್ರದೇಶಗಳಲ್ಲಿ ಕಾನೂನು ತೊಡುಕಾಗಲಿದೆ. ಅದೇ ರೀತಿ ಗ್ರಾಮಾಂತರ ಭಾಗದಲ್ಲಿ ಜನರು ಸಂಜೆ 6 ಗಂಟೆಯೊಳಗೆ ಮನೆ ಸೇರಬೇಕಾಗುತ್ತದೆ. ಇಲ್ಲವಾದರೆ ಊರನ್ನೇ ಬಿಡುವ ಸಂದರ್ಭ ಎದುರಾಗಬಹುದು.
ಕಸ್ತೂರಿ ರಂಗನ್ ವರದಿ ಪುನಃ ಪರಿಷ್ಕರಿಸಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪಕ್ಷಾತೀತವಾಗಿ ಎಲ್ಲರನ್ನು ಕರೆದು, ಅಭಿಪ್ರಾಯ ಸಂಗ್ರಹಿಸಲಾಗುವುದು. ಈ ಸಂಬಂಧ ರಾಜಕೀಯ ಸಲ್ಲದು. ಕಸ್ತೂರಿ ರಂಗನ್ ವರದಿಯಲ್ಲಿ ಕೇರಳ ಮಾದರಿ ಕೆಲವು ಬದಲಾವಣೆ ತಂದು ಜಾರಿಗೊಳಿಸಿದರೆ ಸೂಕ್ತ.
ಮಲೆನಾಡು ಭಾಗದಲ್ಲಿ ಪರಿಸರ ಉಳಿದಿದ್ದರೆ ಅದು ರೈತರಿಂದ ಮಾತ್ರ. ಆದ್ದರಿಂದ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುವ ಹಕ್ಕಿಗೆ ಧಕ್ಕೆ ಉಂಟಾಗಕೂಡದು. ಪ್ರಸ್ತುತ ಈ ಯೋಜನೆಯನ್ನು ತಿರಸ್ಕರಿಸಲಾಗುವುದು. ಕಸ್ತೂರಿ ರಂಗನ್ ವರದಿ ಮತ್ತೊಮ್ಮೆ ಪರಿಸ್ಕರಣೆ ಆಗಲೇಬೇಕು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ಮುಖಂಡರಾದ ಕಲಗೋಡು ರತ್ನಾಕರ್, ರಮೇಶ್ ಶೆಟ್ಟಿ, ಡಾ.ಶ್ರೀನಿವಾಸ ಕರಿಯಣ್ಣ, ಶಾಂತಕುಮಾರ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಉಪನ್ಯಾಸಕ ಅರೆಸ್ಟ್, ವಿದ್ಯಾರ್ಥಿನಿ ನೀಡಿದ್ದ ದೂರಿನ ಹಿನ್ನಲೆ ಬಂಧನ, ಕಾರಣವೇನು?