SHIVAMOGGA LIVE NEWS | POLITICS NEWS | 7 ಏಪ್ರಿಲ್ 2022
ತೀರ್ಥಹಳ್ಳಿಯ ಗೌರವ ಉಳಿಸುವುದಕ್ಕಾದರೂ ಆರಗ ಜ್ಞಾನೇಂದ್ರ ಅವರು ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್ ಅವರು, ಗೃಹ ಸಚಿವರು ಕಾನೂನು ಕಾಪಾಡಬೇಕು. ಆದರೆ ಅವರೆ ಕೋಮು ಭಾವನೆ ಕೆರಳಿಸುವ ಹೇಳಿಕೆ ನೀಡುತ್ತಿದ್ದಾರೆ. ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ತೀರ್ಥಹಳ್ಳಿಗೆ ಕಳಂಕ ತರುತ್ತಿದ್ದಾರೆ
ತೀರ್ಥಹಳ್ಳಿ ತಾಲೂಕಿನವರಿಗೆ ಎರಡು ಜ್ಞಾನಪೀಠ ಪ್ರಶಸ್ತಿ ಬಂದಿದೆ. 1952ರಿಂದ ಈಚೆಗೆ ಪ್ರತಿ ಸದನದಲ್ಲಿಯು ಶಾಂತವೇರಿ ಗೋಪಾಲಗೌಡ ಅವರ ಪ್ರಸ್ತಾಪವಾಗುತ್ತದೆ. ಆದರೆ ಆರಗ ಜ್ಞಾನೇಂದ್ರ ಅವರು ಇಂತಹ ಕ್ಷೇತ್ರದ ಗೌರವ ಉಳಿಸುವುದಕ್ಕಾದರೂ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಿಮ್ಮನೆ ರತ್ನಾಕರ್ ಆಗ್ರಹಿಸಿದರು.
ನಂದಿತಾ ಕೇಸಿನಲ್ಲೂ ಹೀಗೆ ಮಾಡಿದರು
ತೀರ್ಥಹಳ್ಳಿಯ ನಂದಿತಾ ಪ್ರಕರಣದಲ್ಲಿಯು ಕೂಡ ಇದೆ ರೀತಿ ಮಾಡಿದ್ದರು ಎಂದು ಕಿಮ್ಮನೆ ರತ್ನಾಕರ್ ಅವರು ಆರೋಪಿಸಿದರು. ಆ ಪ್ರಕರಣದಲ್ಲಿ ಕೋಮು ಗಲಭೆ ಸೃಷ್ಟಿ ಮಾಡಿದರು. ಇಬ್ಬರು ಯುವಕರು ಉರ್ದು ಮಾತನಾಡಿದರು ಎಂದು ಹಬ್ಬಿಸಿದರು. ಈಗಲೂ ಅದೇ ಮಾದರಿಯ ಕೋಮು ಭಾವನೆ ಕೆರಳಿಸುತ್ತಿದ್ದಾರೆ ಎಂದರು.
ದೇಶದ್ರೋಹದ ಪ್ರಕರಣ ದಾಖಲಿಸಬೇಕು
ಆರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿ ಕೋಮು ಗಲಭೆ ತಡೆಯಲು ಇದ್ದಾರೋ, ಗಲಭೆ ಸೃಷ್ಟಿಸಲು ಇದ್ದಾರೋ ಸ್ಪಷ್ಟಪಡಿಸಬೇಕು. ಚಂದ್ರು ಹತ್ಯೆ ಪ್ರಕರಣ ಸಂಬಂಧ ಅವರ ಹೇಳಿಕೆ ಹಿನ್ನೆಲೆ ಗೃಹ ಸಚಿವರ ವಿರುದ್ಧೆ ದೇಶ ದ್ರೋಹದ ಪ್ರಕರಣ ದಾಖಲು ಮಾಡಬೇಕು. ಸಿ.ಟಿ.ರವಿ ಅವರ ವಿರುದ್ಧವು ಪ್ರಕರಣ ದಾಖಲು ಮಾಡಬೇಕು. ಇನ್ನು, ನಿಷೇಧಾಜ್ಞೆ ಉಲ್ಲಂಘನೆ ಮಾಡಿದ ಸಚಿವ ಈಶ್ವರಪ್ಪ ವಿರುದ್ಧವು ಕೇಸ್ ದಾಖಲಿಸಬೇಕು ಎಂದು ಕಿಮ್ಮನೆ ರತ್ನಾಕರ್ ಅವರು ಆಗ್ರಹಿಸಿದರು.
ಪೊಲೀಸರ ಹಾದಿ ತಪ್ಪಿಸುತ್ತಿದ್ದಾರೆ
ಪೊಲೀಸರು ಗೃಹ ಸಚಿವರ ಹಾದಿ ತಪ್ಪಿಸುತ್ತಿದ್ದಾರೆ ಅನ್ನುವುದು ಸುಳ್ಳು. ಗೃಹ ಸಚಿವರೆ ಪೊಲೀಸರ ದಿಕ್ಕು ತಪ್ಪಿಸುತ್ತಿದ್ದಾರೆ. ನಂದಿತಾ ಪ್ರಕರಣದಲ್ಲಿ ಕಾರಿನಲ್ಲಿ ಬಂದವರು ಉರ್ದು ಮಾತನಾಡುತ್ತಿದ್ದರು ಎಂದು ಹೇಳಿಕೆ ನೀಡಿದ್ದರು. ಈಗಲು ಅದೆ ರೀತಿಯ ಹೇಳಿಕೆ ನೀಡಿದ್ದಾರೆ. ನಂದಿತಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಕೇಳುತ್ತಿದ್ದರು. ಈಗ ಅವರದ್ದೇ ಸರ್ಕಾರವಿದೆ. ಅವರ ಗೃಹ ಸಚಿವರು ಈಗೇಕೆ ಸಿಬಿಐಗೆ ಒಪ್ಪಿಸುತ್ತಿಲ್ಲ ಎಂದು ಕಿಮ್ಮನೆ ರತ್ನಾಕರ್ ಅವರು ಪ್ರಶ್ನಿಸಿದರು.
POLITICS NEWS
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200