ಶಿವಮೊಗ್ಗ ಲೈವ್.ಕಾಂ | SHIMOGA NEWS | 05 MARCH 2021
ಭದ್ರಾವತಿಯಲ್ಲಿ ಬಿಜೆಪಿ ಮುಖಂಡರು ನೀಡುತ್ತಿರುವ ಪಟ್ಟಿಯ ಆಧಾರದ ಮೇಲೆ ಪೊಲೀಸರು ಕೇಸ್ ಹಾಕುತ್ತಿದ್ದಾರೆ. ಅಲ್ಲಿಯ ಪೊಲೀಸರು ಬಿಜೆಪಿ ಕಾರ್ಯಕರ್ತರ ರೀತಿ ವರ್ತಿಸುತ್ತಿದ್ದಾರೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್ ಅವರು, ಭದ್ರಾವತಿಯಲ್ಲಿ ಬಿಜೆಪಿಯವರು ಕೊಡುತ್ತಿರುವ ಪಟ್ಟಿ ಆಧಾರದ ಮೇಲೆ ಪ್ರಕರಣ ದಾಖಲು ಮಾಡುತ್ತಿದ್ದಾರೆ. ಸಂಗಮೇಶ್ವರ್ ಅವರು ಬೆಂಗಳೂರಿನಲ್ಲಿದ್ದಾರೆ. ಇಲ್ಲಿ ಏನು ಬೇಕಾದರೂ ನಡೆಸಬಹುದು ಅಂತಾ ಇದ್ದರೆ ಇವತ್ತು ಮಧ್ಯಾಹ್ನ 2 ಗಂಟೆ ಒಳಗೆ ಎಲ್ಲವು ನಿಲ್ಲಬೇಕು ಎಂದು ಗಡುವು ವಿಧಿಸಿದರು.
ಕೋಮು ಗಲಭೆ ಸೃಷ್ಟಿಯ ಉದ್ದೇಶ
ಕೋಮು ಗಲಭೆ ಸೃಷ್ಟಿಯೆ ಬಿಜೆಪಿಯವರ ಉದ್ದೇಶ. ತೀರ್ಥಹಳ್ಳಿ, ಸಾಗರದಲ್ಲಿ ಇದೆ ರೀತಿ ಮಾಡಿದರು. ಅದೆ ಮಾದರಿ ಭದ್ರಾವತಿಯಲ್ಲಿ ನಡೆಸುತ್ತಿದ್ದಾರೆ. ಭದ್ರಾವತಿಯಲ್ಲಿ ಕಾಂಗ್ರೆಸ್ನವರು ಹಣ ಹಾಕಿದ್ದ ಕಾರ್ಯಕ್ರಮ. ಬಿಜೆಪಿಯವರು ಅಲ್ಲಿ ಹೋಗಿ ಭಾಗವಹಿಸಿದ್ದೇಕೆ. ಗಲಾಟೆ ಮಾಡಿಸುವುದಕ್ಕಾಗಿಯೇ ಅವರು ಭಾಗಿಯಾಗಿದ್ದಾರೆ. ಈಗಾಗಲೆ ಹಲವರನ್ನು ಪೊಲೀಸರು ಕರೆದೊಯ್ದಿದ್ದಾರೆ. ಬಿಜೆಪಿಯವರ ಪಟ್ಟಿ ಆಧಾರದ ಮೇಲೆ ಪೊಲೀಸರು ಈ ರೀತಿ ಮಾಡಿದ್ದಾರೆ ಎಂದು ಕಿಮ್ಮನೆ ರತ್ನಾಕರ್ ಆರೋಪಿಸಿದ್ದಾರೆ.
ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆ ನಿಷೇಧಾಜ್ಞೆ
ಕಾಂಗ್ರೆಸ್ನವರು ಪ್ರತಿಭಟನೆ ಮಾಡಬಾರದು ಎಂಬ ಉದ್ದೇಶದಿಂದ ಭದ್ರಾವತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಆದರೆ ಬಿಜೆಪಿಯವರ ಪ್ರತಿಭಟನೆಗೆ ಮಾತ್ರ ಅವಕಾಶ ಇದೆ. ಕಾಂಗ್ರೆಸ್ನವರು ಜನರಿಗೆ ವಿಚಾರ ತಿಳಿಸಬಾರದು ಅಂತಾ ಈಗ ನಿಷೇಧಾಜ್ಞೆ ವಿಧಿಸಿ, ಮನೆಗೆ ನುಗ್ಗಿ ಕಾರ್ಯಕರ್ತರನ್ನು ಕರೆದೊಯ್ಯುತ್ತಿದ್ದಾರೆ.
ಸಂಗಮೇಶ್ವರ್, ಕುಟುಂಬದ ವಿರುದ್ಧ ಸುಳ್ಳು ಕೇಸ್
ಶಾಸಕ ಸಂಗಮೇಶ್ವರ್ ಮತ್ತು ಅವರ ಕುಟಂಬದವರ ವಿರುದ್ಧ ಸುಳ್ಳು ಪ್ರಕರಣ ದಾಖಲು ಮಾಡಿದ್ದಾರೆ. ಇದನ್ನು ಹಿಂಪಡೆಯಬೇಕು. ಮಾಜಿ ಶಾಸಕ ಅಪ್ಪಾಜಿಗೌಡರು ಈಗ ಇಲ್ಲ. ಸಂಗಮೇಶ್ವರ್ ಒಬ್ಬರೆ ಆಗಿದ್ದಾರೆ. ಹಾಗಾಗಿ ಅವರನ್ನು ಮಣಿಸಬಹುದು ಅಂದುಕೊಂಡಿದ್ದರೆ ಅದು ತಪ್ಪು ಎಂದು ಕಿಮ್ಮನೆ ರತ್ನಾಕರ್ ಎಚ್ಚರಿಸಿದರು.
ಕಾಂಗ್ರೆಸ್ನಿಂದ ಪ್ರತಿಭಟನೆ
ಭದ್ರಾವತಿಯಲ್ಲಿ ಪೊಲೀಸರು ಸುಳ್ಳು ಪ್ರಕರಣ ದಾಖಲು ವಿರೋಧಿಸಿ ಮಾರ್ಚ್ 9ರಂದು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಿದ್ದೇವೆ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟಿಸಲಿದ್ದೇವೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯ ಕಲಗೋಡು ರತ್ನಾಕರ್, ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೇಶ್, ಭದ್ರಾವತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರೇಗೌಡ, ಹಾಪ್ಕಾಮ್ಸ್ ನಿರ್ದೇಶಕ ವಿಜಯ ಕುಮಾರ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿ ಇದ್ದರು.