SHIVAMOGGA LIVE NEWS | 15 ಮಾರ್ಚ್ 2022
ಸರ್ಕಾರದ ತೀರ್ಮಾನವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಮುಸ್ಲಿಂ ಹೆಣ್ಣು ಮಕ್ಕಳಿಗೆ ಅನ್ಯಾಯ ಆಗದ ರೀತಿಯಲ್ಲಿ ಸರ್ಕಾರ ಯೋಚನೆ ಮಾಡಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಕೋರ್ಟ್ ತೀರ್ಮಾನವನ್ನು ಸ್ವಾಗತ ಮಾಡುತ್ತೇನೆ. ದೇಶದಲ್ಲಿ ಇರುವ ಗೊಂದಲ ನಿವಾರಣೆ ಆಗಿದೆ. ಎಲ್ಲಾ ವಿದ್ಯಾರ್ಥಿಗಳು ತಕ್ಷಣದಿಂದ ಶಾಲೆ, ಕಾಲೇಜುಗಳಿಗೆ ತೆರಳಬೇಕು ಎಂದು ಸಲಹೆ ನೀಡಿದರು.
ಮಕ್ಕಳ ಶಿಕ್ಷಣ ಹಾಳಾಗಿದೆ
ಮಕ್ಕಳ ಶಿಕ್ಷಣಕ್ಕೆ ಸಮಸ್ಯೆ ಆಗಿದೆ. ಅವರ ವಿದ್ಯಭ್ಯಾಸ ಮತ್ತು ಪರೀಕ್ಷೆಗೆ ತೊಂದರೆ ಆಗಿದೆ. ಮಧ್ಯಂತರ ತೀರ್ಪು ಕೊಟ್ಟಾಗಲೆ ಎಲ್ಲರೂ ಅದನ್ನು ಪಾಲಿಸಿದ್ದರೆ ಇಷ್ಟೊಂದು ಸಮಸ್ಯೆ ಉದ್ಬವ ಆಗುತ್ತಿರಲಿಲ್ಲ. ಮುಸ್ಲಿಂ ಹೆಣ್ಣು ಮಕ್ಕಳಿಗೆ ಅನ್ಯಾಯ ಆಗದ ರೀತಿಯಲ್ಲಿ ಸರ್ಕಾರ ಯೋಚನೆ ಮಾಡಲಿದೆ ಎಂದು ತಿಳಿಸಿದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200