ಶಿವಮೊಗ್ಗದಲ್ಲಿ ಬಹಿರಂಗ ಪ್ರಚಾರ ಇವತ್ತೇ ಕೊನೆ, ಯಾವ್ಯಾವ ಅಭ್ಯರ್ಥಿಯ ಪ್ರಚಾರ ಹೇಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 MAY 2024

ELECTION NEWS : ಲೋಕಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇವತ್ತು ತೆರೆ ಬೀಳಲಿದೆ. ಈ ಹಿನ್ನೆಲೆ ಶಿವಮೊಗ್ಗದಲ್ಲಿ ಅಭ್ಯರ್ಥಿಗಳು ಅಬ್ಬರದ ಪ್ರಚಾರ ಮತ್ತು ಸುದ್ದಿಗೋಷ್ಠಿಗಳನ್ನು ನಡೆಸುತ್ತಿದ್ದಾರೆ.

ಸಂಜೆವರೆಗೂ ಅಬ್ಬರದ ಪ್ರಚಾರ

ಮತದಾನಕ್ಕೆ 48 ಗಂಟೆ ಮೊದಲು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಅದರಂತೆ ಇವತ್ತು ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರ ಕೊನೆಯಾಗಲಿದೆ. ಕ್ಷೇತ್ರ ವ್ಯಾಪ್ತಿಯ ಮತದಾರರಲ್ಲದ ರಾಜಕೀಯ ಮುಖಂಡರು, ಸ್ಟಾರ್‌ ಕ್ಯಾಂಪೇನರ್‌ಗಳು ಇವತ್ತು ಕ್ಷೇತ್ರ ತೊರೆಯಬೇಕಾಗುತ್ತದೆ. ಹೀಗಾಗಿ ಅಭ್ಯರ್ಥಿಗಳು ಕೊನೆ ಹಂತದ ಅಬ್ಬರದ ಪ್ರಚಾರ ಆರಂಭಿಸಿದ್ದಾರೆ. ಇವತ್ತು ಸಂಜೆಯಿಂದ ಮನೆ ಮನೆ ಪ್ರಚಾರ ಕಾರ್ಯ ನಡೆಯಲಿದೆ.

ಕೊನೆ ದಿನ ಹೇಗಿದೆ ಪ್ರಚಾರ

  • ಬಿ.ವೈ.ರಾಘವೇಂದ್ರ, ಬಿಜೆಪಿ ಅಭ್ಯರ್ಥಿ

ಕೊನೆಯ ದಿನವು ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಇವತ್ತು ಬೆಳಗ್ಗೆ ವಿವಿಧ ಪ್ರಮುಖರ ಜೊತೆ ಚರ್ಚಿಸಿದರು. ಸಭೆಗಳನ್ನು ನಡೆಸಿದರು. ಬಳಿಕ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು. ನಂತರ ರಿಪ್ಪನ್‌ಪೇಟೆ ಸಮೀಪದ ಬಸವಾಪುರ ಗ್ರಾಮಕ್ಕೆ ತೆರಳಿ ಆನೆ ದಾಳಿಗೆ ಮೃತರಾದ ತಿಮ್ಮಪ್ಪ ಅವರ ಮನೆಗೆ ಭೇಟಿ ನೀಡಿದ್ದರು. ಕುಟುಂಬಕ್ಕೆ ಸಾಂತ್ವನ ಹೇಳಿದರು.

  • ಗೀತಾ ಶಿವರಾಜ್‌ ಕುಮಾರ್‌, ಕಾಂಗ್ರೆಸ್‌ ಅಭ್ಯರ್ಥಿ

ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಇಂದು ಬೆಳಗ್ಗೆ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು. ಬಳಿಕ ಶಿಕಾರಿಪುರದಲ್ಲಿ ರೋಡ್‌ ಶೋನಲ್ಲಿ ಭಾಗವಹಿಸಿದ್ದರು.

  • ಕೆ.ಎಸ್.ಈಶ್ವರಪ್ಪ, ಪಕ್ಷೇತರ ಅಭ್ಯರ್ಥಿ

ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಶನಿವಾರ ಸಂಜೆ ಶಿವಮೊಗ್ಗ ನಗರದಲ್ಲಿ ಬೃಹತ್‌ ರೋಡ್‌ ಶೋ ಆಯೋಜಿಸಿದ್ದರು. ಇವತ್ತು ತಮ್ಮ ಬೆಂಬಲಿಗರನ್ನು ಭೇಟಿಯಾಗಿ, ಚರ್ಚೆ ನಡೆಸಿದರು. ಇಂದು ಸಂಜೆ ಪತ್ರಿಕಾಗೋಷ್ಠಿ ಆಯೋಜಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ – ಕುಂಸಿ ಮಧ್ಯೆ ರೈಲ್ವೆ ಲೆವೆಲ್‌ ಕ್ರಾಸಿಂಗ್‌ ಬಂದ್‌, ವಾಹನಗಳಿಗೆ ಪರ್ಯಾಯ ಮಾರ್ಗ, ಯಾವುದದು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment