ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 29 APRIL 2024
SHIMOGA : ಲೋಕಸಭೆ ಚುನಾವಣೆಗೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ. ಇದರ ಬೆನ್ನಿಗೆ ಅವರೊಂದಿಗೆ ಗುರುತಿಸಿಕೊಂಡಿರುವ ಹತ್ತು ಮಂದಿಯನ್ನು ಪಕ್ಷದಿಂದ ಉಚ್ಛಾಟಿಸುವಂತೆ ಬಿಜೆಪಿ ನಗರ ಘಟಕದ ವತಿಯಿಂದ ಜಿಲ್ಲಾ ಅಧ್ಯಕ್ಷರಿಗೆ ಶಿಫಾರಸು ಮಾಡಲಾಗಿದೆ.
ಪಕ್ಷಕ್ಕೆ ಮುಜುಗರ ತಂದಿದ್ದಾರೆ
‘ಬಿಜೆಪಿ ನಗರ ಕಾರ್ಯಕರ್ತರು ಬಂಡಾಯ ಅಭ್ಯರ್ಥಿ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡು ಅವರ ಜೊತೆಗೆ ಗುರುತುಸಿಕೊಂಡಿದ್ದಾರೆ. ಇದರಿಂದ ಪಕ್ಷಕ್ಕೆ ಮುಜುಗರ ಉಂಟಾಗಿದೆ. ಆದ್ದರಿಂದ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಆರು ವರ್ಷ ಪಕ್ಷದಿಂದ ಉಚ್ಛಾಟಿಸಬೇಕುʼ ಎಂದು ಬಿಜೆಪಿ ನಗರ ಅಧ್ಯಕ್ಷ ಮೋಹನ್ ರೆಡ್ಡಿ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.
ಹತ್ತು ಮಂದಿ ಉಚ್ಛಾಟನೆಗೆ ಶಿಫಾರಸು
ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಇ.ವಿಶ್ವಾಸ್, ಶಂಕರ್ ಗನ್ನಿ, ಎಸ್.ಜಿ.ರಾಜು, ಲಕ್ಷ್ಮಿ ಶಂಕರನಾಯ್ಕ, ಸುವರ್ಣ ಶಂಕರ್, ಆರತಿ ಆ.ಮ.ಪ್ರಕಾಶ್, ಲತಾ ಗಣೇಶ್, ಶಿವಮೊಗ್ಗ ಬಿಜೆಪಿ ಕೋರ್ ಕಮಿಟಿ ಸದಸ್ಯ ಕೆ.ಇ.ಕಾಂತೇಶ್, ನಗರ ಉಪಾಧ್ಯಕ್ಷ ಮೋಹನ್ ರಾವ್ ಜಾಧವ್, ಸಹ್ಯಾದ್ರಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅನಿತಾ ಮಂಜುನಾಥ್ ಉಚ್ಛಾಟನೆಗೆ ಶಿಫಾರಸು ಮಾಡಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಸಿಟಿ ಸೆಂಟರ್ ಮಾಲ್‌ನಲ್ಲಿ ಚುನಾವಣ ಮಾಡಲ್, ಹೇಗಿದೆ ಮಾದರಿ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422