ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 7 SEPTEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಜೆಡಿಎಸ್ ಪಕ್ಷದ ಶಿವಮೊಗ್ಗ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್ ಕಾಂಗ್ರೆಸ್ (Congress Party) ಸೇರ್ಪಡೆಯಾಗುತ್ತಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಶ್ರೀಕಾಂತ್ ಚರ್ಚೆ ನಡೆಸಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ಎಂ.ಶ್ರೀಕಾಂತ್ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದರು. ಪಕ್ಷ ಸೇರ್ಪಡೆ, ರಾಜಕೀಯ ಭವಿಷ್ಯ, ಮುಂದಿನ ಚುನಾವಣೆಗೆ ಕಾರ್ಯಕರ್ತರ ಸಂಘಟನೆ ಬಗ್ಗೆ ಚರ್ಚೆ ನಡೆಸಿದರು. ಈ ಭೇಟಿಯ ಫೋಟೊ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಚರ್ಚೆ ಹುಟ್ಟುಹಾಕಿದೆ.
ಮುಂದಿನ ವಾರ ಸೇರ್ಪಡೆ
ಇನ್ನು, ಡಿ.ಕೆ.ಶಿವಕುಮಾರ್ ಭೇಟಿ ಕುರಿತು ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಎಂ.ಶ್ರೀಕಾಂತ್, ‘ನಿನ್ನೆ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದೇನೆ. ಮುಂದಿನ ವಾರ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದೇನೆ. ಯಾವುದೆ ಷರತ್ತುಗಳು, ಅಧಿಕಾರದ ನಿರೀಕ್ಷೆ ಇಲ್ಲದೆ ಪಕ್ಷ ಸೇರ್ಪಡೆಯಾಗುತ್ತಿದ್ದೇನೆ. 23 ವರ್ಷ ಯಾವುದೆ ನಿರೀಕ್ಷೆ, ಅಧಿಕಾರದ ಆಸೆ ಇಲ್ಲದೆ ಸಂಘಟನೆ ಮಾಡಿದ್ದೆ. ಮುಂದೆ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡುತ್ತೇನೆʼ ಎಂದು ತಿಳಿಸಿದರು.
ಬಹುಕಾಲ ಜೆಡಿಎಸ್ ಪಕ್ಷ ಸಂಘಟನೆ
ಎಂ.ಶ್ರೀಕಾಂತ್ ಜೆಡಿಎಸ್ ಪಕ್ಷದ ಜಿಲ್ಲೆ ಮತ್ತು ರಾಜ್ಯಮಟ್ಟದ ವಿವಿಧ ಜವಾಬ್ದಾರಿ ನಿಭಾಯಿಸಿದ್ದರು. ಈ ಹಿಂದೆ ಸತತ ಎಂಟು ವರ್ಷ ಜಿಲ್ಲಾಧ್ಯಕ್ಷರಾಗಿ ಪಕ್ಷ ಸಂಘಟನೆ ಮಾಡಿದ್ದರು. ಆ ಅವಧಿಯಲ್ಲಿ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಮೂರು ಶಾಸಕ ಸ್ಥಾನ ಗೆದ್ದಿತ್ತು.
ಇದನ್ನೂ ಓದಿ – ಆಯನೂರು ಮಂಜುನಾಥ್, ಶಿಕಾರಿಪುರದ ನಾಗರಾಜ ಗೌಡ ಕಾಂಗ್ರೆಸ್‌ಗೆ, ಸಭೆಯಲ್ಲಿ ಯಾರೆಲ್ಲ ಏನೇನು ಹೇಳಿದರು?
ಶ್ರೀಕಾಂತ್ ಅವರಿಗೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ ನೀಡಲಾಗಿತ್ತು. 2021ರ ನವೆಂಬರ್‌ನಲ್ಲಿ ಪುನಃ ಶ್ರೀಕಾಂತ್ ಅವರಿಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಜವಾಬ್ದಾರಿ ವಹಿಸಲಾಯಿತು. 2023ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿತು. ಮತ್ತೊಂದು ಕ್ಷೇತ್ರದಲ್ಲಿ ಸ್ವಲ್ಪ ಅಂತರದಲ್ಲಿ ಸೋಲಾಯಿತು.
ಆಯನೂರು ಬೆನ್ನಿಗೆ ಶ್ರೀಕಾಂತ್ ಸೇರ್ಪಡೆ
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಶಿವಮೊಗ್ಗ ಅಭ್ಯರ್ಥಿಯಾಗಿದ್ದ ಆಯನೂರು ಮಂಜುನಾಥ್ ಈಚೆಗೆ ಕಾಂಗ್ರೆಸ್ (Congress Party) ಸೇರ್ಪಡೆಯಾಗಿದ್ದಾರೆ. ಅವರ ಬೆನ್ನಿಗೆ ಎಂ.ಶ್ರೀಕಾಂತ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ. ಶ್ರೀಕಾಂತ್ ಸೇರ್ಪಡೆ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತರ ಉತ್ಸಾಹ ಹೆಚ್ಚಿಸಿದೆ.