SHIVAMOGGA LIVE NEWS | 2 ಮಾರ್ಚ್ 2022
ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಇವತ್ತು ಶಿವಮೊಗ್ಗದಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು. ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷದ ಮುಖಂಡರು ಮಧು ಬಂಗಾರಪ್ಪ ಅವರಿಗೆ ಶುಭ ಹಾರೈಸಿದರು. ಈ ವೇಳೆ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ತಮ್ಮ ಗುರಿ ಎಂದು ಅವರು ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ಇರುವ ತಮ್ಮ ಮನೆಯಲ್ಲಿ ಮಧು ಬಂಗಾರಪ್ಪ ಹುಟ್ಟುಹಬ್ಬ ಆಚರಿಸಿಕೊಂಡರು. ಪಕ್ಷದ ಪ್ರಮುಖರು, ಅಭಿಮಾನಿಗಳು, ಬೆಂಬಲಿಗರು ಮಧು ಬಂಗಾರಪ್ಪ ಅವರಿಗೆ ಶುಭ ಹಾರೈಸಿದರು. ಇದೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕ ಮಧು ಬಂಗಾರಪ್ಪ, ರಾಜಕೀಯ ಗುರಿಗಳ ಕುರಿತು ತಿಳಿಸಿದರು.
ಮಧು ಬಂಗಾರಪ್ಪ ಏನೆಲ್ಲ ಹೇಳಿದರು?
ನಮ್ಮ ತಂದೆ ಎಸ್. ಬಂಗಾರಪ್ಪ ಅವರು ಹೇಳಿದಂತೆ ಸೋತು ರಾಜಕಾರಣ ಮಾಡುವುದು ಕೂಡ ಒಂದು ಪಾಠ. ಇದರ ಜೊತೆಗೆ ನಾಡಿನಲ್ಲಿ ಸಂತೋಷದ ವಾತಾವರಣ ಇರಲಿ. ಪ್ರೀತಿಯಿಂದ ಬಾಳೋಣ. ನಾನು ತೆಗೆದುಕೊಂಡ ರಾಜಕೀಯ ನಿರ್ಧಾರ ಸರಿಯಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಹೋರಾಟದ ಮೂಲಕ ಕಟ್ಟಲಾಗುವುದು. ಪಕ್ಷಕ್ಕೆ ಹೆಚ್ಚಿನ ಶಕ್ತಿ ನೀಡಲಾಗುವುದು. ಪಕ್ಷದ ಎಲ್ಲಾ ಹಿರಿಯರ ಆಶಯವೂ ಇದೇ ಆಗಿದೆ. ಅಭಿವೃದ್ಧಿಯತ್ತ ಸಾಗುವುದೇ ನಮ್ಮ ಗುರಿಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರವುದು ನಮ್ಮ ಗುರಿ.
ಬಗರ್ ಹುಕುಂ ಸಮಸ್ಯೆ ತೀವ್ರವಾಗಿದೆ. ಯಾವುದೇ ಕಾರಣಕ್ಕೂ ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ. ಅವರ ಪರವಾಗಿ ಶಾಸಕನಾಗಿದ್ದಾಗಲೂ ಹೋರಾಟ ಮಾಡಿದ್ದೇನೆ. ಈಗಲೂ ಮಾಡುವೆ. ಹಂತ ಹಂತವಾಗಿ ಸೊರಬದಿಂದಲೇ ಈ ಹೋರಾಟ ಆರಂಭವಾಗಿ ಇಡೀ ರಾಜ್ಯಾದ್ಯಂತ ವಿಸ್ತಾರಗೊಳ್ಳುತ್ತದೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಮಾಜಿ ಶಾಸಕ ಆರ್. ಪ್ರಸನ್ನಕುಮಾರ್, ಜೆಡಿಎಸ್ ಪ್ರಮುಖ ಎಂ.ಶ್ರೀಕಾಂತ್, ಮುಖಂಡರಾದ ಹುಲ್ತಿಕೊಪ್ಪ ಶ್ರೀಧರ್, ಬಂಡಿ ರಾಮಚಂದ್ರ, ಪಿ.ಒ.ಶಿವಕುಮಾರ್, ಶ್ವೇತಾ ಬಂಡಿ, ರಮೇಶ್ ಶಂಕರಘಟ್ಟ, ಇಕ್ಕೇರಿ ರಮೇಶ್, ಪಾರ್ವತಮ್ಮ, ಜಿ.ಡಿ. ಮಂಜುನಾಥ್, ವೈ.ಹೆಚ್. ನಾಗರಾಜ್, ಎಸ್.ಪಿ. ಶೇಷಾದ್ರಿ, ಪಲ್ಲವಿ, ವಾಸಪ್ಪಗೌಡ, ಚಿನ್ನಪ್ಪ, ರವಿ ಮೊದಲಾದವರಿದ್ದರು.