ಬೆಂಗಳೂರು: ಸಚಿವರಾಗಿ ಪುನರಾಯ್ಕೆಗೊಂಡ ಬಳಿಕ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಮಧು ಬಂಗಾರಪ್ಪ, ರಾಜ್ಯ ಹಾಗೂ ರಾಷ್ಟ್ರೀಯ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ರಾಜ್ಯದ ಸೇವೆ ಮಾಡಲು ಪಕ್ಷದ ಹಿರಿಯರು ಪುನಃ ಅವಕಾಶ ಕಲ್ಪಿಸಿದ್ದು, ಪಕ್ಷದ ಎಲ್ಲ ಮುಖಂಡರಿಗೆ ಹಾಗೂ ಸೊರಬ ಕ್ಷೇತ್ರದ ಜನತೆಗೆ ಧನ್ಯವಾದಗಳು ಎಂದು ತಿಳಿಸಿದರು.

ಮಧು ಬಂಗಾರಪ್ಪ ಏನಂದ್ರು? ಇಲ್ಲಿದೆ 3 ಪಾಯಿಂಟ್
- ಪಾಯಿಂಟ್ 1: ಪುನರಾಯ್ಕೆ ಸಂತೋಷ ತಂದಿದೆ. ಕಾಯುವುದು ಅನಿವಾರ್ಯವಾಗಿತ್ತು, ಈಗ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದೆ. ಹೈಕಮಾಂಡ್ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಂಡು ಮುನ್ನಡೆಯುವುದು ನಮ್ಮ ಮುಂದಿರುವ ದೊಡ್ಡ ಕೆಲಸ.
- ಹಿಂದಿನ ಜವಾಬ್ದಾರಿಗಳು: ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾಗಿ, ಪ್ರಣಾಳಿಕೆ ರಚನಾ ಸಮಿತಿ ಉಪಾಧ್ಯಕ್ಷರಾಗಿ ಮತ್ತು ಶಿಕ್ಷಣ ಸಚಿವರಾಗಿ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದ್ದೆ. ಟೀಕೆ-ಟಿಪ್ಪಣಿಗಳ ಆಚೆಗೆ ಉತ್ತಮ ಕೆಲಸ ಮಾಡಿರುವ ತೃಪ್ತಿಯಿದೆ.
- ಖಾತೆ ಹಂಚಿಕೆ: ಮುಂದಿನ ದಿನಗಳಲ್ಲಿ ಯಾವುದೇ ಖಾತೆ ನೀಡಿದರೂ ಅದನ್ನು ಅಷ್ಟೇ ಸಮರ್ಥವಾಗಿ ನಿಭಾಯಿಸುತ್ತೇನೆ. ಖಾತೆ ಯಾವುದು ಎಂಬುದು ಸಂಪೂರ್ಣವಾಗಿ ಮುಖಂಡರಿಗೆ ಬಿಟ್ಟ ವಿಚಾರವಾಗಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಮುಖಂಡರ ಶುಭಾಶಯ
ನೂತನ ಸಚಿವರ ಪಟ್ಟಿ ಪ್ರಕಟವಾಗುತ್ತಿದ್ದಂತೆ ಜಿಲ್ಲಾ ಕಾಂಗ್ರೆಸ್‌ನ ಮುಖಂಡರು ಬೆಂಗಳೂರಿನಲ್ಲಿರುವ ಮಧು ಬಂಗಾರಪ್ಪ ನಿವಾಸಕ್ಕೆ ಭೇಟಿ ನೀಡಿ ಶುಭಶಯ ತಿಳಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಾಲಗೋಡು ರತ್ನಾಕರ್, ಎನ್.ರಮೇಶ್ ಸೇರಿ ಹಲವರು ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿ ಅಭಿನಂದನೆ ತಿಳಿಸಿದರು.