ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2021
ಅಧಿಕಾರಕ್ಕಾಗಿ ಕಾಂಗ್ರೆಸ್ ಸೇರಿಲ್ಲ. ಜನರ ಕಷ್ಟಗಳನ್ನು ನಿವಾರಿಸಲು ಕಾಂಗ್ರೆಸನ್ನು ಅಧಿಕಾರಕ್ಕೆ ತರಬೇಕಿದೆ. ಅಧಿಕಾರ ಮತ್ತು ಅಹಂಕಾರದಿಂದ ಮೆರೆಯುತ್ತಿರುವ ಬಿಜೆಪಿ ಸರ್ಕಾರಕ್ಕೆ ಜನರ ಮೂಲಕವೇ ಉತ್ತರ ಕೊಡಬೇಕಿದೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು ಮಾತನಾಡಿದ ಅವರು, ಕಾಂಗ್ರೆಸ್ ಬಡವರ ಪಕ್ಷ. ಬಡವರ ಉದ್ಧಾರ ಕಾಂಗ್ರೆಸ್ನಿಂದ ಮಾತ್ರ ಸಾಧ್ಯ. ಆ ಕಾರಣಕ್ಕಾಗಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇನೆ ಎಂದರು.
ಇದನ್ನೂ ಓದಿ | ಕಾಂಗ್ರೆಸ್ ಸೇರ್ಪಡೆ ಬಳಿಕ ಶಿವಮೊಗ್ಗಕ್ಕೆ ಮೊದಲ ಭೇಟಿ, ಮಧು ಬಂಗಾರಪ್ಪಗೆ ಅದ್ಧೂರಿ ಸ್ವಾಗತ, ಎಂಆರ್ಎಸ್ನಿಂದ ಬೈಕ್ ರಾಲಿ
ಎಲ್ಲರೂ ಒಟ್ಟಾಗಿ ಕಾಂಗ್ರೆಸ್ ಬಲಪಡಿಸಿ ಮತ್ತೆ ಅಧಿಕಾರಕ್ಕೆ ತರಬೇಕು. ಕಾಂಗ್ರೆಸ್ ಸರ್ಕಾರ ಬಡವರಿಗೆ ನೂರಾರು ಯೋಜನೆಗಳನ್ನು ಜಾರಿಗೆ ತಂದಿದೆ. ಜನನಾಯಕರಾಗಿದ್ದ ನಮ್ಮ ತಂದೆ ಎಸ್. ಬಂಗಾರಪ್ಪ ಅವರೂ ಹಲವು ಯೋಜನೆಗಳನ್ನು ಜಾರಿಗೆ ತಂದರು. ನಾನೂ ಅವರ ಹಾದಿಯಲ್ಲೇ ಸಾಗುತ್ತೇನೆ ಎಂದರು.
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸೇರಿ ಜಿಲ್ಲೆಯ ಎಲ್ಲ ಕಾಂಗ್ರೆಸ್ ನಾಯಕರೊಂದಿಗೆ ಸೇರಿ ಪಕ್ಷವನ್ನು ಮತ್ತಷ್ಟು ಬಲಪಡಿಸಿ ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವಂತೆ ನೋಡಿಕೊಳ್ಳುತ್ತೇನೆ ಎಂದು ಹೇಳಿದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200