ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 27 MAY 2023
BANGALORE : ರಾಜ್ಯದ ನೂತನ ಸಚಿವರ (Minister) ಪಟ್ಟಿಯನ್ನು ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದೆ. 24 ಹೊಸ ಸಚಿವರು ಇವತ್ತು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಬಾರಿ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಗೆ ಪ್ರಾತಿನಿಧ್ಯ ಸಿಕ್ಕಿದೆ. ಸೊರಬ ಶಾಸಕ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ಲಭಿಸಿದೆ.
ನಿರೀಕ್ಷೆಯಂತೆ ಸೊರಬ ಶಾಸಕ ಮಧು ಬಂಗಾರಪ್ಪ ಅವರಿಗೆ ಸಂಪುಟದಲ್ಲಿ ಸ್ಥಾನ ದಕ್ಕಿದೆ. ಇವತ್ತು ಬೆಳಗ್ಗೆ 11.45ಕ್ಕೆ ನೂತನ ಸಚಿವರಿಗೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.
ಸಿಎಂ, ಡಿಸಿಎಂಗೆ ಆಪ್ತರು
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬಣ ಪ್ರತ್ಯೇಕವಾಗಿ ಪಟ್ಟಿ ನೀಡಿದ್ದು, ಅದರಂತೆ ಸಂಪುಟ ರಚನೆಯಾಗುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಸೊರಬ ಶಾಸಕ ಮಧು ಬಂಗಾರಪ್ಪ ಅವರು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಇಬ್ಬರಿಗೂ ಆಪ್ತರು. ಹಾಗಾಗಿ ಮಧು ಬಂಗಾರಪ್ಪ ಸಚಿವರಾಗುವುದು (Minister) ಬಹುತೇಕ ಖಚಿತವಾಗಿತ್ತು.
ಇದನ್ನೂ ಓದಿ – ಶಿವಮೊಗ್ಗ ಡಿಸಿಸಿ ಬ್ಯಾಂಕಿಗೆ ಮೂರು ವರ್ಷದ ಬಳಿಕ ಮಂಜುನಾಥ ಗೌಡ ಎಂಟ್ರಿ, ನಿರ್ದೇಶಕ ಸ್ಥಾನ ಊರ್ಜಿತ, ಏನಿದು ಪ್ರಕರಣ?
ಸಚಿವ ಸ್ಥಾನ ಮೊದಲೇ ಸಿಗಬೇಕಿತ್ತು
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು 8 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರು. ಅದೆ ವೇದಿಕೆಯಲ್ಲಿ ಮಧು ಬಂಗಾರಪ್ಪ ಅವರು ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಬೇಕಿತ್ತು. ಆದರೆ ಕೊನೆಯ ಕ್ಷಣದಲ್ಲಿ ಅವರ ಹೆಸರು ಪಟ್ಟಿಯಿಂದ ಕೈ ಬಿಡಲಾಗಿತ್ತು ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದೆ ಕಾರಣಕ್ಕೆ ಮಧು ಬಂಗಾರಪ್ಪ ಅವರು ಮುನಿಸಿಕೊಂಡಿದ್ದರು ಎಂದು ಸುದ್ದಿಯಾಗಿತ್ತು. ಆ ದಿನ ಕಾರ್ಯಕ್ರಮಕ್ಕೆ ಮಧು ಬಂಗಾರಪ್ಪ ಗೈರಾಗಿದ್ದು ಇದಕ್ಕೆ ಪುಷ್ಠಿ ನೀಡಿತ್ತು.
ಉಸ್ತುವಾರಿ ಮಂತ್ರಿಯಾಗ್ತಾರಾ?
ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಮೂವರು ಶಾಸಕರಾಗಿದ್ದಾರೆ. ಈ ಪೈಕಿ ಮಧು ಬಂಗಾರಪ್ಪ ಅವರು ಮಾತ್ರ ಸಚಿವರಾಗಿದ್ದಾರೆ. ಹಾಗಾಗಿ ಅವರೆ ಜಿಲ್ಲಾ ಉಸ್ತುವಾರಿ ಸಚಿವರಾಗುತ್ತಾರೆ ಎಂದು ಹೇಳಲಾಗುತ್ತಿದೆ. ಜಿಲ್ಲೆಯವರಿಗೆ ಉಸ್ತುವಾರಿಯ ಹೊಣೆಗಾರಿಕೆ ನೀಡಬೇಕು ಎಂಬ ಒತ್ತಡವಿದೆ. ಇನ್ನು, ಜಿಲ್ಲೆಯವರೆ ಉಸ್ತುವಾರಿ ಸಚಿವರಾದರೆ ಇಲ್ಲಿಯ ಸಮಸ್ಯೆಗಳು, ಜನರ ಬೇಡಿಕೆಗಳನ್ನು ಅರಿತು ಈಡೇರಿಸಲು ಸುಲಭವಾಗಲಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಮಾಜಿ ಸಿಎಂ ಮಗ ಮೊದಲ ಬಾರಿ ಮಿನಿಸ್ಟರ್
ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಗರಡಿಯಲ್ಲಿ ಮಧು ಬಂಗಾರಪ್ಪ ಅವರು ರಾಜಕಾರಣ ಕಲಿತರು. ಸೊರಬ ವಿಧಾನಸಭೆ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಶಾಸಕರಾಗಿದ್ದರು. ಶಿವಮೊಗ್ಗ ಲೋಕಸಭೆಯ ಉಪ ಚುನಾವಣೆ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರಾಗಿ ನೇಮಕವಾಗಿದ್ದರು. ಪ್ರಣಾಳಿಕೆ ಸಮಿತಿಯಲ್ಲಿ ಮಧು ಬಂಗಾರಪ್ಪ ಮಹತ್ವದ ಜವಾಬ್ದಾರಿ ನಿಭಾಯಿಸಿದ್ದರು. ಈಗ ಸಚಿವರಾಗಿ ಅಧಿಕಾರ ಸ್ವೀಕರಿಸುತ್ತಿದ್ದು, ಪ್ರಬಲ ಖಾತೆ ಸಿಗುವ ನಿರೀಕ್ಷೆ ಇದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422