ಸಚಿವ ಸ್ಥಾನದ ಕುರಿತು ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಹೇಳಿಕೆ, ಏನಂದ್ರು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ಶಿವಮೊಗ್ಗ: ನನ್ನನ್ನು ಸಚಿವ ಸ್ಥಾನದಲ್ಲಿ ಮುಂದುವರಿಸುವುದು ಅಥವಾ ಬಿಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಮಾಜಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನದ ಎರಡನೇ ಪಟ್ಟಿಗೆ ಬೇಡಿಕೆ ಇದ್ದೇ ಇರುತ್ತದೆ. ಅದಕ್ಕೆ ಬೇಡಿಕೆ ಇಡುವುದು ತಪ್ಪಲ್ಲ. ಸಚಿವ ಸ್ಥಾನದಲ್ಲಿ ಮುಂದುವರಿಸುವ ಬಗ್ಗೆ ಹೈಕಮಾಂಡ್ ತೀರ್ಮಾನಿಸಲಿದೆ. ರಾಜ್ಯಸಭೆ ಮತ್ತು ಎಂಎಲ್‌ಸಿ ಚುನಾವಣೆ ಬಳಿಕ ಹೈಕಮಾಂಡ್ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂದರು.

Madhu-Bangarappa-meeting-at-Shimoga-DC-office.

ಕೆಪಿಎಸ್ ಶಾಲೆ ಕಾಂಗ್ರೆಸ್ ಸರ್ಕಾರದ ಕನಸಿನ ಕೂಸು. ಅದು ಮುಂದುವರಿಯಲಿದೆ. ಶಿವಮೊಗ್ಗದಿಂದಲೇ ಆರಂಭವಾಗಲಿದೆ. ಈ ಬಗ್ಗೆ ಇದ್ದ ಗೊಂದಲ ಬಗೆಹರಿದಿದೆ. ಸಿಎಂ ಬದಲಾವಣೆಯಿಂದ ಆ ಕಾರ್ಯಕ್ರಮ ಮುಂದೂಡಲಾಗಿದೆ. ರಾಜ್ಯದ ಉತ್ತಮ ಶಿಕ್ಷಣ ವ್ಯವಸ್ಥೆಯಿಂದಾಗಿ ಸಿಇಟಿಯಲ್ಲಿ ಶೇ.74ರಷ್ಟು ಉತ್ತಮ ಫಲಿತಾಂಶ ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!